ರಾಜಕೀಯ

ಪದೇ ಪದೇ ಬಿಜೆಪಿ ಆಪರೇಷನ್ ಕಮಲಕ್ಕೆ 'ಕೈ' ಹಾಕಲು ಕಾರಣವೇನು? ಮುಖಂಡರಿಂದ ವಿಷಯ ಬಹಿರಂಗ!

ರಾಜ್ಯ ರಾಜಕೀಯ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ, ಕರ್ನಾಟಕದಲ್ಲಿ ಅಸ್ಥಿತ್ವದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ...

ಪದೇ ಪದೇ ಬಿಜೆಪಿ ಆಪರೇಷನ್ ಕಮಲಕ್ಕೆ 'ಕೈ' ಹಾಕಲು ಕಾರಣವೇನು? ಮುಖಂಡರಿಂದ ವಿಷಯ ಬಹಿರಂಗ!
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ರಾಜ್ಯ ರಾಜಕೀಯ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ, ಕರ್ನಾಟಕದಲ್ಲಿ ಅಸ್ಥಿತ್ವದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅಡಿ ಮುಂಬರುವ ಲೋಕಸಭೆ ಚುನಾವಣೆ ಎದುರಿಸಲು ಕೇಂದ್ರದ ಬಿಜೆಪಿ ನಾಯಕರಿಗೆ ಸುತರಾಂ ಇಷ್ಟ ಇಲ್ಲ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಗಳು ರಾಜ್ಯದ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತವೆ ಎಂಬ ಭಯ ಬಿಜೆಪಿಗೆ ಕಾಡುತ್ತಿದೆ,ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ಯತ್ನಿಸುತ್ತಿಲ್ಲ, ಬದಲಿಗೆ ಸರ್ಕಾರ ಉರುಳಿಸಲು ಮಾತ್ರ ಬಿಜೆಪಿ ಸಿದ್ಧವಾಗಿದೆ, ಹೀಗಾಗಿ ಶಾಸಕರನ್ನು ದೂರ ಕರೆದೊಯ್ದಿದೆ.
ಸದ್ಯ ಅಸ್ಥಿತ್ವದಲ್ಲಿರುವ  ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವುದಷ್ಟೇ ಬಿಜೆಪಿ ಗುರಿ ಎಂದು ಬಿಜೆಪಿ ಸದಸ್ಯರೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಎಲ್ಲಾ ಸಮೂಹದ ಜನರ ಪ್ರಬಲ ಬೆಂಬಲವಿಲ್ಲ, ಹೀಗಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ದೋಸ್ತಿ ಪಕ್ಷಗಳು ಸರ್ಕಾರಿ ಯಂತ್ರ ದುರುಪಯೋಗ ಪಡಿಸಿಕೊಳ್ಳುತ್ತವೆ ಎಂದು ನಂಬಿರುವ ಬಿಜೆಪಿ ರಾಜ್ಯ ಸರ್ಕಾರಕ್ಕೆ ಕೌಂಟರ್ ಕೊಡಲು ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.