ಅಖಾಡದಲ್ಲಿ ನಾವೂ ಕುಸ್ತಿ ಆಡಿದವರು, ಪಟ್ಟುಗಳು ನಮಗೂ ಗೊತ್ತು: ಸಿದ್ದರಾಮಯ್ಯ ಟ್ವೀಟ್
ರಾಜ್ಯದ ಕೆಲವು ಬಿಜೆಪಿ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ, ನಾವೇನು ಕೈಕಟ್ಟಿ ಕೂತಿಲ್ಲ, ರಾಜಕೀಯ ಅಖಾಡದಲ್ಲಿ ನಾವು ಕುಸ್ತಿ ಆಡಿದವರು, ...

Published On :
ಬೆಂಗಳೂರು: ಬಿಜೆಪಿ ಆಪರೇಷನ್ ಕಮಲದಿಂದ ಸರ್ಕಾರಕ್ಕೆ ಯಾವುದೇ ಭಯವಿಲ್ಲ, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ, ಸರ್ಕಾರ ಬೀಳುತ್ತದೆ ಎಂದು ಹೇಳಿಕೆಗಳೆಲ್ಲಾ ಮಾಧ್ಯಮಗಳ ವರದಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಇದರ ಬೆನ್ನಲ್ಲೆ ಪ್ರಸ್ತುತ ನಡೆಯುತ್ತಿರುವ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ,
ರಾಜ್ಯದ ಕೆಲವು ಬಿಜೆಪಿ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ, ನಾವೇನು ಕೈಕಟ್ಟಿ ಕೂತಿಲ್ಲ, ರಾಜಕೀಯ ಅಖಾಡದಲ್ಲಿ ನಾವು ಕುಸ್ತಿ ಆಡಿದವರು, ಪಟ್ಟುಗಳು ನಮಗೂ ಗೊತ್ತು ಎಂದು ಸಿದ್ದರಾಮಯ್ಯ ಖಾರವಾಗಿಯೇ ಟ್ವೀಟ್ ಮಾಡಿದ್ದಾರೆ.
ಬುಧವಾರ ಆರು ಶಾಸಕರು ರಾಜಿನಾಮೆ ನೀಡುವ ವದಂತಿ ಹಬ್ಬಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸರಣಿ ಸಭೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿPoliticsಸರ್ಕಾರTweetSiddaramaiahಸಿದ್ದರಾಮಯ್ಯಸಮ್ಮಿಶ್ರ ಸರ್ಕಾರಟ್ವೀಟ್ರಾಜ್ಯstatetopple the coalition
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


