ಬಿಜೆಪಿ ಸರ್ಜರಿಗೆ ಜೆಡಿಎಸ್ ಮಾಸ್ಟರ್ ಪ್ಲಾನ್: ಒಕ್ಕಲಿಗ ಶಾಸಕರೇ ಮೈನ್ ಟಾರ್ಗೆಟ್!
ಸರ್ಕಾರ ಉರುಳಿಸುವ ಬಿಜೆಪಿ ಪ್ರಯತ್ನಕ್ಕೆ ಮಾಸ್ಟರ್ ಸ್ಚ್ರೋಕ್ ನೀಡಲು ಜೆಡಿಎಸ್ ಕೂಡ ಸಿದ್ಧತೆ ನಡೆಸುತ್ತಿದೆ, ಹೀಗಾಗಿ ಬಿಜೆಪಿ ಶಾಸಕರ ಜೊತೆ ...

Published On :
ಮೈಸೂರು: ಸರ್ಕಾರ ಉರುಳಿಸುವ ಬಿಜೆಪಿ ಪ್ರಯತ್ನಕ್ಕೆ ಮಾಸ್ಟರ್ ಸ್ಚ್ರೋಕ್ ನೀಡಲು ಜೆಡಿಎಸ್ ಕೂಡ ಸಿದ್ಧತೆ ನಡೆಸುತ್ತಿದೆ, ಹೀಗಾಗಿ ಬಿಜೆಪಿ ಶಾಸಕರ ಜೊತೆ ಸಂಪರ್ಕದಲ್ಲಿರುವುದಾಗಿ ಜೆಡಿಎಸ್ ತಿಳಿಸಿದೆ,
ಬಿಜೆಪಿ ಶಾಸಕರ ಜೊತೆ ಸಂಪರ್ಕದಲ್ಲಿರುವುದಾಗಿ ಜೆಡಿಎಸ್ ಹೇಳಿರುವುದು ಕೇಸರಿ ಪಕ್ಷಕ್ಕೆ ನುಂಗಲಾರದ ಬಿಸಿತುಪ್ಪವಾಗಿದೆ, ಸರ್ಕಾರವನ್ನು ರಕ್ಷಿಸುವುದು ಹಾಗೂ ಬಿಜೆಪಿ ಶಾಸಕರನ್ನು ಸೆಳೆಯುವ ಯತ್ನ ನಡೆಸುತ್ತಿರುವುದಾಗಿ ಸಣ್ಣ ನೀರಾವರಿ ಸಚಿವ ಸಿ,ಎಸ್ ಪುಟ್ಟರಾಜು ಮತ್ತಿತರ ಜೆಡಿಎಸ್ ನಾಯಕರು ಹೇಳಿದ್ದಾರೆ.
ಬಿಜೆಪಿಯಲ್ಲಿರುವ ಒಕ್ಕಲಿಗ ಶಾಸಕರನ್ನು ತನ್ನತ್ತ ಸೆಳೆಯಲು ಜೆಡಿಎಸ್ ಪ್ರಯತ್ನಿಸುತ್ತಿದೆ, ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಸೆಳೆಯುವುದು, ಸ್ವಲ್ಪ ಕಷ್ಟದ ಕೆಲಸವಾಗಿದೆ, ಹೀಗಿದ್ದರೂ ಬಿಜೆಪಿ ಶಾಸಕರನ್ನು ಸೆಳೆಯಲು ಮುಂದಾಗಿದೆ.
ಇನ್ನೂ ಸಿದ್ದರಾಮಯ್ಯ ಕೂಡ ತಾವು ಬಿಜೆಪಿ ಶಾಸಕರ ಜೊತೆ ಸಂಪರ್ಕದಲ್ಲಿರುವುದಾಗಿ ಬಾಂಬ್ ಸಿಡಿಸಿದ್ದಾರೆ, ಜೆಡಿಎಸ್ ಶಾಸಕರನ್ನು ಸೋಲಿಸಲು ಚುನಾವಣೆಯಲ್ಲಿ ನಾನು ಕಷ್ಟ ಪಟ್ಟಿದ್ದೇನೆ, ಹೀಗಿರುವಾಗ ನಾನು ಏಕೆ ಜೆಡಿಎಸ್ ಸೇರಲಿ ಎಂದು ಮೈಸೂರು ಭಾಗದ ಒಕ್ಕಲಿಗ ಶಾಸಕರೊಬ್ಬರು ಹೇಳಿದ್ದಾರೆ.
ಇನ್ನೂ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ, ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಬಿಜೆಪಿ ಸರ್ಕಾರ ಉರುಳಿಸುವ ತಂತ್ರ ನಡೆಸುತ್ತಿದೆ ಎಂದು ಸಚಿವ ಎಚ್.ಡಿ ರೇವಣ್ಣ ಕಿಡಿಕಾರಿದ್ದಾರೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSbjpಬಿಜೆಪಿಶಾಸಕMLAಜೆಡಿಎಸ್ಎಚ್.ಡಿ ರೇವಣ್ಣಸಿ.ಎಸ್ ಪುಟ್ಟರಾಜುH.d RevannaSa.Ra MaheshC.S Puttarajuಸಾರಾ ಮಹೇಶ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


