ರಾಜಕೀಯ

ಸಿಎಲ್ ಪಿಯಲ್ಲಿ ಕಾಂಗ್ರೆಸ್ ನೈಜ ಬಣ್ಣ ಬಯಲು: ಬಿಎಸ್ ವೈ; ನಮ್ಮ ಶಾಸಕರ ಬಗ್ಗೆ ಅವರು ಯೋಚಿಸಬೇಕಿಲ್ಲ: ಡಿಸಿಎಂ

ಶಾಸಕಾಂಗ ಸಭೆ ಜೆಡಿಎಸ್ ಕಾಂಗ್ರೆಸ್ ಗೆ ಸೇರಿದ್ದು, ಅವರ ಎಲ್ಲಾ ಸಮಸ್ಯೆಗಳಿಗೆ ನಾನು ಹೊಣೆಯಲ್ಲ, ನಮ್ಮ 104 ಶಾಸಕರು ನಮ್ಮ ಪಕ್ಷದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು,...

ಸಿಎಲ್ ಪಿಯಲ್ಲಿ ಕಾಂಗ್ರೆಸ್ ನೈಜ ಬಣ್ಣ ಬಯಲು: ಬಿಎಸ್ ವೈ; ನಮ್ಮ ಶಾಸಕರ ಬಗ್ಗೆ ಅವರು ಯೋಚಿಸಬೇಕಿಲ್ಲ: ಡಿಸಿಎಂ
ಯಡ್ಯೂರಪ್ಪ ಮತ್ತು ಜಿ.ಪರಮೇಶ್ವರ್
Published On :
ಬೆಂಗಳೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರ 
ಸಭೆ ಕರೆದಿದ್ದಾರೆ, ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ ಸಿಎಲ್ ಪಿ ಸಭೆಯಿಂದ ಕಾಂಗ್ರೆಸ್ ನೈಜ ಬಣ್ಣ ಬಯಲಾಗಲಿದೆ ಎಂದು ಹೇಳಿದ್ದಾರೆ.
ಶಾಸಕಾಂಗ ಸಭೆ ಜೆಡಿಎಸ್ ಕಾಂಗ್ರೆಸ್ ಗೆ ಸೇರಿದ್ದು, ಅವರ ಎಲ್ಲಾ ಸಮಸ್ಯೆಗಳಿಗೆ ನಾನು ಹೊಣೆಯಲ್ಲ, ನಮ್ಮ 104 ಶಾಸಕರು  ನಮ್ಮ ಪಕ್ಷದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು,  ಹಾಗೂ ನಾವು ಲೋಕಸಭೆ ಚುನಾವಣೆ ಬಗ್ಗೆ ಯೋಚಿಸುತ್ತಿದ್ದೇವೆ  ಎಂದು   ಯಡಿಯೂರಪ್ಪ ಹೇಳಿದ್ದಾರೆ.
ಇನ್ನೂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ನಾವು ಸಿಎಲ್ ಪಿ ಸಭೆಯಲ್ಲಿ  ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲಾಗುತ್ತದೆ. ಹಾಗೂ ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚಿಸಲಾಗುವುದು ಎಂದು ಹೇಳಿದ್ದಾರೆ.
ಎಲ್ಲಾ ಶಾಸಕರು ಸಿಎಲ್ ಪಿ ಸಭೆಯಲ್ಲಿ ಭಾಗವಹಿಸುತ್ತಾರೆ, ನಮ್ಮ ಶಾಸಕರ ಬಗ್ಗೆ ಯಡಿಯೂರಪ್ಪ ಅವರು ಚಿಂತಿಸುವ ಅಗತ್ಯವಿಲ್ಲ ಎಂದು ಪರನೇಶ್ವರ್ ಟಾಂಗ್ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.