ರಾಜಕೀಯ

ಗುರುಗ್ರಾಮ್ ರೆಸಾರ್ಟ್ ನಿಂದ ಬಿಜೆಪಿ ಶಾಸಕರು ಇಂದು ರಾಜ್ಯಕ್ಕೆ ವಾಪಸ್

ಕಳೆದ ಕೆಲ ದಿನಗಳಿಂದ ದೆಹಲಿ ಸಮೀಪ ಗುರುಗ್ರಾಮದ ರೆಸಾರ್ಟ್ ನಲ್ಲಿ ತಂಗಿದ್ದ ಭಾರತೀಯ ಜನತಾ ...

ಗುರುಗ್ರಾಮ್ ರೆಸಾರ್ಟ್ ನಿಂದ ಬಿಜೆಪಿ ಶಾಸಕರು ಇಂದು ರಾಜ್ಯಕ್ಕೆ ವಾಪಸ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳೆದ ಕೆಲ ದಿನಗಳಿಂದ ದೆಹಲಿ ಸಮೀಪ ಗುರುಗ್ರಾಮದ ರೆಸಾರ್ಟ್ ನಲ್ಲಿ ತಂಗಿದ್ದ ಭಾರತೀಯ ಜನತಾ ಪಾರ್ಟಿಯ ಶಾಸಕರು ಶನಿವಾರ ವಾಪಸ್ಸಾಗಲಿದ್ದಾರೆ. ಎಲ್ಲಾ ಶಾಸಕರಿಗೆ ರಾಜ್ಯಕ್ಕೆ ಮರಳುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬಿಜೆಪಿ, ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವುದೇ ಪ್ರಯತ್ನ ಮಾಡುತ್ತಿಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಸರ್ಕಾರದಿಂದ ಜನಪರ ಕೆಲಸ ಮಾಡಿಸಲು ನಮ್ಮಿಂದಾದ ಪ್ರಯತ್ನ ಮಾಡುತ್ತಿದ್ದೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಈ ಮಧ್ಯೆ, ನಿನ್ನೆ ಶಾಸಕಾಂಗ ಪಕ್ಷದ ಸಭೆ ಮುಗಿದ ನಂತರ ತನ್ನ ಶಾಸಕರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ಗಳಿಗೆ ಕಳುಹಿಸಿದೆ.

ಬಿಜೆಪಿ ಕುದುರೆ ವ್ಯಾಪಾರ ನಡೆಸಲು ಪ್ರಯತ್ನಿಸುತ್ತಿದೆ. ಮುಂದಿನ ಲೋಕಸಭೆ ಚುನಾವಣೆಯವರೆಗಾದರೂ ನಮ್ಮ ಶಾಸಕರನ್ನು ಕಾಪಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.