ಮಾಜಿ ಸಿಎಂ ಸಿದ್ದರಾಮಯ್ಯಗೆ ದುಬಾರಿ ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ...!
ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Published On :
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರೊಬ್ಬರು ದುಬಾರಿ ಬೆಲೆಯ ಬೆಂಜ್ ಕಾರೊಂದನ್ನು ಗಿಫ್ಟ್ ನೀಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಹಿಂದೆ ದುಬಾರಿ ಬೆಲೆಯ ವಾಚು ಗಿಫ್ಟ್ ಪಡೆದು ವಿವಾದಕ್ಕಿಡಾಗಿದ್ದ ಸಿದ್ದರಾಮಯ್ಯ ಅವರಿಗೆ ಈಗ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರು ಬರೊಬ್ಬರಿ ಒಂದೂವರೆ ಕೋಟಿ ಮೌಲ್ಯದ ಕಪ್ಪು ಬಣ್ಣದ ಬೆಂಜ್ ಕಾರು ಉಡುಗೊರೆಯಾಗಿ ನೀಡಿದ್ದಾರೆ.
ಶಾಸಕ ಬೈರತಿ ಸುರೇಶ್ ಪತ್ನಿ ಪದ್ಮಾವತಿ ಹೆಸರಿನಲ್ಲಿ ಈ ಕಾರು ನೋಂದಣಿ ಆಗಿದ್ದು, ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಕಾರನ್ನ ಮಾಜಿ ಸಿಎಂಗೆ ಹಸ್ತಾಂತರಿಸಲಾಗಿದೆ ಎನ್ನಲಾಗಿದೆ.
ಇನ್ನು ಈ ದುಬಾರಿ ಕಾರು ಗಿಫ್ಟ್ ಬಗ್ಗೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು, ನಾನು ಸಿದ್ದರಾಮಯ್ಯರ ವಾಚ್, ಕನ್ನಡಕ, ಕಾರಿನ ಬಗ್ಗೆ ಮಾತನಾಡೋದಿಲ್ಲ. ಈ ವಿಚಾರದ ಬಗ್ಗೆ ಮಾತನಾಡಲು ಸಾಕಷ್ಟು ಜನರು, ಮಾಧ್ಯಮಗಳಿವೆ. ಬೇರೆಯವರಿಗೆ ತತ್ವ ಸಿದ್ಧಾಂತಗಳನ್ನ ಹೇಳೋರು ಹೇಗೆ ನಡೆದುಕೊಳ್ತಾರೆ ಅನ್ನೋದು ಮುಖ್ಯ. ಜನ ಎಲ್ಲವನ್ನೂ ನೋಡುತ್ತ ಇರುತ್ತಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


