ಆನಂದ್ ಸಿಂಗ್ ಎದೆಗೆ ಚುಚ್ಚಿದ್ದರಿಂದ ಎದೆನೋವು ಬಂದಿರಬೇಕು; ಆರ್ ಅಶೋಕ್
ಬಳ್ಳಾರಿಯ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆಯಲ್ಲಿ ಮದ್ಯದ ಬಾಟಲಿಯಿಂದ ...

ಬೆಂಗಳೂರು: ಬಳ್ಳಾರಿಯ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆಯಲ್ಲಿ ಮದ್ಯದ ಬಾಟಲಿಯಿಂದ ಎದೆಗೆ ಚುಚ್ಚಿದ್ದರಿಂದ ಎದೆನೋವು ಕಾಣಿಸಿಕೊಂಡಿರಬೇಕು. ಕಾಂಗ್ರೆಸ್ ನಾಯಕರು ಸುಳ್ಳು ಹೇಳಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಆರ್ ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಘಟನೆ ಬಗ್ಗೆ ನಮಗೇನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ನಾನು ಕೂಡ ಈ ಹಿಂದೆ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೂ ನಿಯಮಗಳೇನು, ಮಾಹಿತಿ ಹೇಗೆ ಬರುತ್ತದೆ ಎಂದು ಗೊತ್ತಿದೆ. ಆನಂದ್ ಸಿಂಗ್ ಗೆ ಎದೆನೋವು ಕಾಣಿಸಿಕೊಂಡಿದ್ದು ಎಂದಾದರೆ ಹೊರಗೆ ಬಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಲಿ, ಆಸ್ಪತ್ರೆಯ ವೈದ್ಯರಿಂದ ಪ್ರಕಟಣೆ ಹೊರಡಿಸಲಿ ಇಲ್ಲವೇ ಆಸ್ಪತ್ರೆಯ ಮುಖ್ಯಸ್ಥರನ್ನು ಹೊರಗೆ ಕರೆಸಿ ಮಾಧ್ಯಮಗಳ ಮುಂದೆ ಮಾತನಾಡಿಸಲಿ ನೋಡೋಣ ಎಂದು ಸವಾಲು ಹಾಕಿದರು.
ಇದೊಂದು ಗಂಭೀರ ಪ್ರಕರಣವಾಗಿದ್ದು ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಬೇಕು. ಮಾರಕಾಸ್ತ್ರಗಳು, ಬಾಟಲಿಗಳಿಂದ ಹಲ್ಲೆ ಮಾಡುವುದು ಶಿಕ್ಷಾಕ್ಷ ಅಪರಾಧವಾಗಿದೆ. ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಿ ಎಂದು ಒತ್ತಾಯಿಸಿದರು.
ಮಾತೆತ್ತಿದರೆ ಬಿಜೆಪಿಯವರನ್ನು ಟೀಕಿಸುವ ಕಾಂಗ್ರೆಸ್ ನಾಯಕರಿಗೆ ಇಂದು ನಾಚಿಕೆಯಾಗಬೇಕು. ದೇಶದ ಮುಂದೆ ಇಂದು ರಾಜ್ಯದ ಶಾಸಕರ ಮಾನ ಮರ್ಯಾದೆ ಹರಾಜು ಹಾಕುತ್ತಿದ್ದಾರೆ. ಬಿಜೆಪಿಯ ನೈತಿಕತೆ, ಮರ್ಯಾದೆ ಬಗ್ಗೆ ಪ್ರಶ್ನೆ ಮಾಡುವ ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಕಾಂಗ್ರೆಸ್ ನವರ ಮರ್ಯಾದೆ ಅಪೋಲೋ ಆಸ್ಪತ್ರೆಯೊಳಗಿದೆಯಾ ಅಥವಾ ರೆಸಾರ್ಟ್ ನಲ್ಲಿದೆಯಾ ಎಂದು ತೋರಿಸಲಿ ಎಂದರು.
ಅಧ್ಯಕ್ಷ ಬಿ ಎಸ್ ಯಡಿಯೂರಪ್ಪನವರ ಜೊತೆ ಚರ್ಚಿಸಿ ಬಿಜೆಪಿಯ ಮುಂದಿನ ನಡೆ ಹಾಗೂ ಪ್ರತಿಭಟನೆ ಬಗ್ಗೆ ತೀರ್ಮಾನ ಮಾಡುವುದಾಗಿ ಆರ್ ಅಶೋಕ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


