ಎದೆನೋವು ಕಾಣಿಸಿಕೊಂಡು ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ; ಸಂಸದ ಡಿ ಕೆ ಸುರೇಶ್
ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ಘಟನೆಗೆ ಸಂಬಂಧಪ...

ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಸಂಸದ ಡಿ ಕೆ ಸುರೇಶ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಿಗದಿಯಾಗಿತ್ತು. ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣದಿಂದ ಅದನ್ನು ಮುಂದೂಡಲಾಗಿದೆ.
ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದ ಡಿ ಕೆ ಸುರೇಶ್, ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆನಂದ್ ಸಿಂಗ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ ಎಂದರು.
ನನಗೆ ಇಂದು ಬೆಳಗ್ಗೆ ಅನಂದ್ ಸಿಂಗ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಲಭಿಸಿತ್ತು. ಆದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿ ಅವರನ್ನು ಮಾತನಾಡಿದ್ದೇನೆ. ಅವರ ಆರೋಗ್ಯ ಸ್ಥಿತಿ ಸದ್ಯ ಸುಧಾರಣೆ ಆಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಬಳಿ ಮಾತನಾಡಿರುವ ವೇಳೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದ ಬಗ್ಗೆ ಹೇಳಿದರು. ಆ ಬಳಿಕ ವಿಶ್ರಾಂತಿ ಅಗತ್ಯವಿದ್ದರಿಂದ ನಿದ್ದೆ ಮಾಡಲು ಡಾಕ್ಟರ್ ಸೂಚಿಸಿದ್ದಾರೆ. ಸಂಜೆ ವೇಳೆಗೆ ವೈದ್ಯಕೀಯ ಪರೀಕ್ಷೆಗಳ ಮಾಹಿತಿ ಲಭ್ಯವಾಗಲಿದ್ದು, ತದನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಸ್ಪಷ್ಟನೆ ನೀಡಿದರು.
ಇದೇ ವೇಳೆ ಮಾಧ್ಯಮಗಳ ವರದಿ ಅಲ್ಲಗಳೆದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು. ರೆಸಾರ್ಟಿನಲ್ಲಿ ಯಾವುದೇ ಜಗಳ ಆಗಿಲ್ಲ. ಆನಂದ್ ಸಿಂಗ್ ಅವರ ತಲೆಗೆ ಗಾಯ ಆಗಿರುವುದು ಭೇಟಿ ವೇಳೆ ನನಗೆ ಕಾಣಿಸಲಿಲ್ಲ. ಅಲ್ಲದೇ ರೆಸಾರ್ಟಿನಲ್ಲಿ ಯಾವುದೇ ಪಾರ್ಟಿಯನ್ನು ಆಯೋಜಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆನಂದ್ ಸಿಂಗ್ ಕುಟುಂಬಸ್ಥರು ಮದುವೆಯ ಸಮಾರಂಭದಲ್ಲಿ ಭಾಗಿಯಾಗಿದ್ದು, ಅವರಿಗೂ ಕೂಡ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅವರ ತಂದೆ ತಾಯಿ ಅವರ ಜೊತೆಗೆ ಆಸ್ಪತ್ರೆಯಲ್ಲಿಯೇ ಇದ್ದಾರೆ, ಇದಕ್ಕಿಂತ ಹೆಚ್ಚಿಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳೆಲ್ಲ ಊಹಾಪೋಹ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


