ಪತ್ರ ಸಾಕಾಗಲ್ಲ: ನಾಲ್ವರು ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಮತ್ತೆ ನೋಟಿಸ್
ಶೋಕಾಸ್ ನೋಟಿಸ್ ಗೆ ಪತ್ರದ ಮೂಲಕ ಉತ್ತರಿಸಿರುವ ನಾಲ್ವರು ಅತೃಪ್ತ ಶಾಸಕರಿಗೆ ಮತ್ತೆ ನೋಟಿಸ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ.

Published On :
ಬೆಂಗಳೂರು: ಶೋಕಾಸ್ ನೋಟಿಸ್ ಗೆ ಪತ್ರದ ಮೂಲಕ ಉತ್ತರಿಸಿರುವ ನಾಲ್ವರು ಅತೃಪ್ತ ಶಾಸಕರಿಗೆ ಮತ್ತೆ ನೋಟಿಸ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ.
ಬರೀ ಪತ್ರ ಬರೆದರೆ ಸಾಕಾಗುವುದಿಲ್ಲ. ನೀವು ವೈಯಕ್ತಿಕವಾಗಿ ಬಂದು ಶಾಸಕಾಂಗ ಪಕ್ಷದ ನಾಯಕರನ್ನು ಭೇಟಿ ಮಾಡಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಆದ ನಾಲ್ವರು ಶಾಸಕರಿಗೆ ಮತ್ತೆ ನೋಟಿಸ್ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದ್ದಾರೆ.
ಜನವರಿ 18ರಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ, ಚಿಂಚೋಳಿ ಶಾಸಕ ಉಮೇಶ್ ಜಾಧವ್ ಹಾಗೂ ಬಳ್ಳಾರಿ ಶಾಸಕ ಬಿ ನಾಗೇಂದ್ರ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.
ಶೋಕಾಸ್ ನೋಟಿಸ್ ಗೆ ರಮೇಶ್ ಜಾರಕಿಹೊಳಿ, ಬಿ.ನಾಗೇಂದ್ರ ಹಾಗೂ ಕುಮಟಹಳ್ಳಿ ಅವರು ಪತ್ರದ ಮೂಲಕ ಉತ್ತರಿಸಿದ್ದಾರೆ. ಆದರೆ ಖುದ್ದು ಆಗಮಿಸಿ ಶಾಸಕಾಂಗದ ಪಕ್ಷದ ನಾಯಕರಿಗೆ ವಿವರಣೆ ನೀಡಬೇಕು ಎಂದು ಆ ನಾಲ್ವರು ಶಾಸಕರಿಗೆ ಮತ್ತೆ ನೋಟಿಸ್ ನೀಡುವುದಾಗಿ ಗುಂಡೂರಾವ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


