ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ, ರಾಜ್ಯಪಾಲರ ಭೇಟಿ ಬಳಿಕ ಎಲ್ಲಾ ವಿಷಯ ತಿಳಿಸುವೆ: ಆನಂದ್ ಸಿಂಗ್
ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡಿರುವ ವಿಷಯವನ್ನು ಖುದ್ದು ಆನಂದ್ ಸಿಂಗ್ ಅವರೇ ಖಚಿತಪಡಿಸಿದ್ದಾರೆ.

Published On :
ಬೆಂಗಳೂರು: ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡಿರುವ ವಿಷಯವನ್ನು ಖುದ್ದು ಆನಂದ್ ಸಿಂಗ್ ಅವರೇ ಖಚಿತಪಡಿಸಿದ್ದಾರೆ.
ರಾಜಭವನಕ್ಕೆ ಮುನ್ನ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ್ ಸಿಂಗ್ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಅವರು ನನ್ನ ರಾಜಿನಾಮೆ ಪತ್ರ ಸಿಕ್ಕಿಲ್ಲ ಎಂದು ಹೇಳಿದ್ದಾರೆ, ಹೀಗಾಗಿ ಮತ್ತೊಮ್ಮೆ ರಾಜಿನಾಮೆ ಪತ್ರ ಸಲ್ಲಿಸುವೆ ಎಂದು ಹೇಳಿದ್ದಾರೆ.
ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಎಲ್ಲಾ ವಿಷಯಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


