ಸಮ್ಮಿಶ್ರ ಸರ್ಕಾರಕ್ಕೆ ಕೆಟ್ಟ ಸುದ್ದಿ: ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜಿನಾಮೆ?
ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ....

Published On :
ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ಮನೆಗೆ ತೆರಳಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನೂ ಹಲವು ಕಾಂಗ್ರೆಸ್ ಶಾಸಕರು ರಾಜಿನಾಮೆ ಸಲ್ಲಿಸುವ ಸಾಧ್ಯತೆಯಿದೆ.
ಹಲವು ಕಾಂಗ್ರೆಸ್ ಶಾಸಕರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಭಾರಿ ಕುತೂಹಲ ಸೃಷ್ಟಿಸಿದೆ, ಮೂಲಗಳ ಪ್ರಕಾರ ಶಾಸಕ ಬಿ.ಸಿ ಪಾಟೀಲ್, ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಹಾಗೂ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಸೇರಿದಂತೆ ಹಲವು ಶಾಸಕರು ಶೀಘ್ರದಲ್ಲೇ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಇನ್ನೂ ಆನಂದ್ ಸಿಂಗ್ ಅವರ ರಾಜಿನಾಮೆ ಬಗ್ಗೆ ಸ್ಪೀಕರ್ ಕಚೇರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದರೆ ಆನಂದ್ ಸಿಂಗ್ ಆಪ್ತರು ರಾಜಿನಾಮೆ ಖಚಿತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


