ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ; ಸ್ಪೀಕರ್ ಗೆ ಫ್ಯಾಕ್ಸ್ ಮೂಲಕ ತ್ಯಾಗಪತ್ರ ರವಾನೆ
ಶಾಸಕ ಆನಂದ್ ಸಿಂಗ್ ರಾಜೀನಾಮೆ ನಂತರದ ಬೆಳವಣಿಗೆಗಳು ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಾಗಿರುವುದು ಸ್ಪಷ್ಟವಾಗುತ್ತಿದ್ದು, ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ ಗೋಕಾಕ್ ಶಾಸಕ ರಮೇಶ್

Published On :
ಬೆಂಗಳೂರು: ಶಾಸಕ ಆನಂದ್ ಸಿಂಗ್ ರಾಜೀನಾಮೆ ನಂತರದ ಬೆಳವಣಿಗೆಗಳು ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಾಗಿರುವುದು ಸ್ಪಷ್ಟವಾಗುತ್ತಿದ್ದು, ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಸ್ಪೀಕರ್ ಗೆ ರವಾನಿಸಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ವೈರಲ್ ಆಗತೊಡಗಿದ್ದು, ಮೈತ್ರಿ ಸರ್ಕಾರದ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ.
ಕೈಬರಹದಲ್ಲಿ ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿದೆ. ಆದರೆ ರಮೇಶ್ ಜಾರಕಿಹೊಳಿ ಖುದ್ದಾಗಿ ತೆರಳಿ ಸ್ಪೀಕರ್ ಗೆ ರಾಜೀನಾಮೆ ಪತ್ರ ತಲುಪಿಸದೇ ಇರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ನಿಯಮ ಪಾಲಿಸದ ರಮೇಶ್ ಜಾರಕಿಹೊಳಿ
ಶಾಸಕರ ರಾಜೀನಾಮೆ ಅಂಗೀಕಾರವಾಗಬೇಕಾದರೆ ಖುದ್ದಾಗಿ ತೆರಳಿ ರಾಜೀನಾಮೆ ಪತ್ರವನ್ನು ಸ್ಪೀಕರ್ ಗೆ ತಲುಪಿಸಬೇಕಾಗುತ್ತದೆ. ಫ್ಯಾಕ್ಸ್ ಅಥವಾ ಅಂಚೆ ಮೂಲಕ ತಲುಪಿಸುವ ರಾಜೀನಾಮೆ ಅಂಗೀಕಾರಗೊಳ್ಳುವುದಿಲ್ಲ, ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ನಿಯಮ ಪಾಲನೆ ಮಾಡಿಲ್ಲ ಎಂದು ವಿಶ್ಲೇಶಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


