ಜೆಡಿಎಸ್ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಪದಾಧಿಕಾರಿಗಳ ನೇಮಕ
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಜೆಡಿಎಸ್ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಹೆಚ್ ಡಿ ದೇವೇಗೌಡ ಮುಂದಾಗಿದ್ದಾರೆ.ಬೇರುಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಲು ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪದಾಧಿಕಾರಿಗಳ ನೇಮಕ ಮಾಡುತ್ತಿದ್ದಾರೆ.

Published On :
ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಜೆಡಿಎಸ್ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಹೆಚ್ ಡಿ ದೇವೇಗೌಡ ಮುಂದಾಗಿದ್ದಾರೆ. ಬೇರುಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಲು ರಾಜ್ಯಾದಾದ್ಯಂತ ಪಾದಯಾತ್ರೆ ಮಾತ್ರವಲ್ಲದೇ, ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪದಾಧಿಕಾರಿಗಳ ನೇಮಕ ಮಾಡುತ್ತಿದ್ದಾರೆ.
ಬೆಂಗಳೂರು ನಗರ ಜೆಡಿಎಸ್ ಯುವ ವಿಭಾಗದ ಅಧ್ಯಕ್ಷರನ್ನಾಗಿ ಎಎಂ ಪ್ರವೀಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಹೆಚ್ ಕೆ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ , ಬೆಂಗಳೂರು ನಗರದ ಜೆಡಿಎಸ್ ಯುವ ವಿಭಾಗಕ್ಕೆ ಎ. ಎಂ ಪ್ರವೀಣ್ ಕುಮಾರ್ ಅವರನ್ನು ಅಧಿಕೃವಾಗಿ ನೇಮಿಸಲಾಗಿದೆ.
ಸಮ್ಮಿಶ್ರ ಸರ್ಕಾರದ ಸೂತ್ರದಂತೆ ನಿಗಮ ಮಂಡಳಿಗಳಿಗೆ ನೇಮಕ ಪ್ರಕ್ರಿಯೆಗೂ ಜೆಡಿಎಸ್ ಚಾಲನೆ ನೀಡಿದ್ದು, ಆರ್ಯ ವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ವಿಧಾನಪರಿಷತ್ ಸದಸ್ಯ ಟಿಎಸ್ ಶರವಣ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ವಜಾ ಆದ ನಂತರ ಜೆಡಿಎಸ್ ಕೂಡಾ ತನ್ನ ಪದಾಧಿಕಾರಿಗಳ ನೇಮಕಕ್ಕೆ ಮುಂದಾಗಿದ್ದು,ಉಭಯ ಪಕ್ಷಗಳಿಂದ ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ.ಜುಲೈ 12 ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನಕ್ಕೂ ಮುನ್ನ ಪದಾಧಿಕಾರಿಗಳ ನೇಮಕವನ್ನು ಉಭಯ ಪಕ್ಷಗಳು ಪೂರ್ಣಗೊಳಿಸುವ ವಿಶ್ವಾಸದಲ್ಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


