ರಾಜಕೀಯ

ಶಾಸಕ ನಾಗೇಂದ್ರ ಕೂಡಾ ರಾಜೀನಾಮೆ ಕೊಡ್ತಾರಾ?

ಬಳ್ಳಾರಿ ಜಿಲ್ಲೆಯ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಬೆನ್ನಲ್ಲೇ ಅವರ ಆಪ್ತರಾಗಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ಶಾಸಕ ನಾಗೇಂದ್ರ ಕೂಡಾ ರಾಜೀನಾಮೆ ಕೊಡ್ತಾರಾ?
ಶಾಸಕ ನಾಗೇಂದ್ರ
Published On :
ಬೆಂಗಳೂರು: ಬಳ್ಳಾರಿ ಜಿಲ್ಲೆಯ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಬೆನ್ನಲ್ಲೇ ಅವರ ಆಪ್ತರಾಗಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.
ಆನಂದ್ ಸಿಂಗ್ ಹಾಗೂ ನಾಗೇಂದ್ರ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ,  ದಿಢೀರ್ ಬೆಳವಣಿಯೊಂದರಲ್ಲಿ ಆನಂದ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ  ಎಂದು ಹೇಳಲಾಗುತ್ತಿದ್ದು, ನಾಗೇಂದ್ರ ಕೂಡಾ ಬೆಂಗಳೂರಿನಲ್ಲಿಯೇ ಇದ್ದಾರೆ ಎಂದು ತಿಳಿದುಬಂದಿದೆ.
ನಾಗೇಂದ್ರ ಮಾತ್ರವಲ್ಲ, ಏಳಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿದೆ.ಆಷಾಢ ಮಾಸ ಶುರುವಾಗುತ್ತಿದ್ದಂತೆ ಕಾಂಗ್ರೆಸ್ ಅತೃಪ್ತ ಶಾಸಕರ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.