ಶಾಸಕ ಆನಂದ್ ಸಿಂಗ್ ರಾಜಿನಾಮೆ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದೇನು?
ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ ಎಂಬ ಮಾಧ್ಯಮಗಳ ವರದಿಗಳಿಗೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ...

Published On :
ಬೆಂಗಳೂರು: ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ ಎಂಬ ಮಾಧ್ಯಮಗಳ ವರದಿಗಳಿಗೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ,
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ರಮೇಶ್ ಕುಮಾರ್ ನನಗೂ ,ಅದಕ್ಕೂ ಸಂಬಂಧವಿಲ್ಲ, ಕಾಂಗ್ರೆಸ್ ನವರಾಗಲಿ ಬಿಜೆಪಿಯವರಾಗಲಿ ಯಾರೇ ರಾಜಿನಾಮೆ ನೀಡಿದರೇ ನನಗೇನು ಸಂಬಂಧವಿಲ್ಲ, ಆನಂದ್ ಸಿಂಗ್ ನನಗೆ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಿನ್ನೆ ರಾತ್ರಿಯಿಂದ ನಾನು ಮನೆಯಲ್ಲಿಯೇ ಇದ್ದೇನೆ, ಯಾರೂ ನನ್ನ ಬಳಿ ಬಂದಿಲ್ಲ, ರಾಜಿನಾಮೆ ಪತ್ರ ನೀಡಿಲ್ಲ, ಒಬ್ಬರಲ್ಲ, ಇಪ್ಪತ್ತು ಮಂದಿ ರಾಜಿನಾಮೆ ಕೊಟ್ಟರು ಸ್ವೀಕರಿಸುತ್ತೇನೆ, ಆನಂದ್ ಸಿಂಗ್ ರಾಜಿನಾಮೆ ಬಗ್ಗೆ ನನಗೇನು ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


