ರಾಜಕೀಯ

ಕಾಂಗ್ರೆಸ್ ಮಾತ್ರವಲ್ಲ, ಜೆಡಿಎಸ್ ಶಾಸಕರು ರಾಜಿನಾಮೆ ನೀಡಲಿದ್ದಾರೆ: ಈಶ್ವರಪ್ಪ ಹೊಸ ಬಾಂಬ್!

ಕೇವಲ ಕಾಂಗ್ರೆಸ್ ಮಾತ್ರವಲ್ಲ, ಜೆಡಿಎಸ್ ಶಾಸಕರು ಕೂಡ ರಾಜಿನಾಮ ನೀಡಲಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ..

ಕಾಂಗ್ರೆಸ್ ಮಾತ್ರವಲ್ಲ, ಜೆಡಿಎಸ್ ಶಾಸಕರು ರಾಜಿನಾಮೆ ನೀಡಲಿದ್ದಾರೆ: ಈಶ್ವರಪ್ಪ ಹೊಸ ಬಾಂಬ್!
ಕೆ.ಎಸ್ ಈಶ್ವರಪ್ಪ
Published On :
ಶಿವಮೊಗ್ಗ: ಕೇವಲ ಕಾಂಗ್ರೆಸ್ ಮಾತ್ರವಲ್ಲ, ಜೆಡಿಎಸ್ ಶಾಸಕರು ಕೂಡ ರಾಜಿನಾಮ ನೀಡಲಿದ್ದಾರೆ ಎಂದು  ಹಿರಿಯ ಬಿಜೆಪಿ ಮುಖಂಡ ಮತ್ತು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ, ಶಾಸಕರ ರಾಜಿನಾಮೆಯಿಂದಲೇ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ
ಬಳ್ಳಾರಿಯಲ್ಲಿ 3,367 ಎಕರೆ ಭೂಮಿಯನ್ನು ಸರ್ಕಾರ ಜಿಂದಾಲ್ ಸಂಸ್ಥೆಗೆ ಮಾರಿದ್ದನ್ನು ವಿರೋಧಿಸಿ ಆನಂದ್ ಸಿಂಗ್ ರಾಜಿನಾಮೆ ನೀಡಿದ್ದಾರೆ. ಭೂಮಿಯ ಮೂಲ ಬೆಲೆ 3 ಸಾವಿರ ಕೋಟಿ ಇದೆ, ಆದರೆ ಸರ್ಕಾರ ಕೇವಲ 30 ಕೋಟಿಗೆ ಮಾರಾಟ ಮಾಡಿದೆ ಎಂದು ಆರೋಪಿಸಿದ್ದಾರೆ.
ಸ್ವಾಭಿಮಾನವುಳ್ಳ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದನ್ನು ವಿರೋಧಿಸಿ ರಾಜಿನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.