ರಾಜಕೀಯ

ಕಾಂಗ್ರೆಸ್ ಶಾಸಕ ರಾಜಿನಾಮೆ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮೊದಲ ಪ್ರತಿಕ್ರಿಯೆ

ಬಳ್ಳಾರಿ ವಿಜಯನಗರ ಶಾಸಕ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿ ಎರಡು ದಿನಗಳು ಕಳೆದಿವೆ, ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಮಾಜಿ .,..

ಕಾಂಗ್ರೆಸ್  ಶಾಸಕ ರಾಜಿನಾಮೆ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮೊದಲ ಪ್ರತಿಕ್ರಿಯೆ
ಎಚ್.ಡಿ ದೇವೇಗೌಡ
Published On :
ಬೆಂಗಳೂರು: ಬಳ್ಳಾರಿ ವಿಜಯನಗರ ಶಾಸಕ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿ ಎರಡು ದಿನಗಳು ಕಳೆದಿವೆ, ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಈ ಸಂಬಂಧ  ಪ್ರತಿಕ್ರಿಯೆ ನೀಡಿದ್ದಾರೆ. 
ಜೆ.ಪಿ.ಭವನದಲ್ಲಿ ಸಭೆ ನಡೆಸಿ ಮಾತನಾಡಿದ ದೇವೇಗೌಡರು ಇದೇನು ದೊಡ್ಡ ಸಮಸ್ಯೆಯಲ್ಲ, ಸಿದ್ದರಾಮಯ್ಯ ಅಂಥ ಮುತ್ಸದ್ದಿ ಇದ್ದಾರೆ. ಡಿಸಿಎಂ ಪರಮೇಶ್ವರ್ ಹಾಗೂ ಡಿ.ಕೆ ಶಿವಕುಮಾರ್ ಇದ್ದಾರೆ. ಅವರೆಲ್ಲ ಈ ಸಮಸ್ಯೆ ಪರಿಹರಿಸುತ್ತಾರೆ.ಎಂದು ಹೇಳಿದ್ದಾರೆ.
ಈ ರಾಜೀನಾಮೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಈ ಎಲ್ಲಾ ನಾಯಕರು ಸಮಸ್ಯೆ ಪರಿಹಾರ ಮಾಡ್ತಾರೆ. ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿದ್ದು ಜಿಂದಾಲ್ ವಿಚಾರಕ್ಕೆ. ಇದೆಲ್ಲ ದೊಡ್ಡ ಸಮಸ್ಯೆ ಅಲ್ಲ ಎಂದು ಹೇಳಿದ್ದಾರೆ. 
ನಮ್ಮ ಜೆಡಿಎಸ್‌ನ 37 ಶಾಸಕರು ಭದ್ರವಾಗಿದ್ದಾರೆ. ಕಾಂಗ್ರೆಸ್‌ನ ಎಲ್ಲಾ ಶಾಸಕರು ಭದ್ರವಾಗಿದ್ದಾರೆ. ಸರ್ಕಾರ ಕೂಡಾ ಭದ್ರವಾಗಿ. ಯಾವುದೇ ತೊಂದರೆಯಾಗುವುದಿಲ್ಲ. ರಾಜೀನಾಮೆ ವಿಚಾರದಲ್ಲಿ ಕೇಂದ್ರ ಬಿಜೆಪಿ ನಾಯಕರ ಕೈವಾಡವಿದೆ ಅನ್ನೋದಕ್ಕೆ ಯಾವುದೇ ಪುರಾವೆ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.