ಬ್ರಹ್ಮಪುತ್ರ ನದಿ ದಡದಲ್ಲಿ ಸ್ನೇಹಿತರ ಜೊತೆ ವಿಶ್ವನಾಥ್ ವಿಹಾರ: ಕುತೂಹಲ ಮೂಡಿಸಿದೆ ದೆಹಲಿ ಭೇಟಿ!
ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರದ ಬುಡ ಅಲ್ಲಾಡುತ್ತಿದೆ ಎಂದು ಹೇಳಲಾಗುತ್ತಿದೆ. ಎಡೆ ಬಿಡದ ರಾಜಕೀಯ ಚಟುವಟಿಕೆಗಳ ನಡುವೆಯೂ ...

Published On :
ಮೈಸೂರು: ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರದ ಬುಡ ಅಲ್ಲಾಡುತ್ತಿದೆ ಎಂದು ಹೇಳಲಾಗುತ್ತಿದೆ. ಎಡೆ ಬಿಡದ ರಾಜಕೀಯ ಚಟುವಟಿಕೆಗಳ ನಡುವೆಯೂ ಜೆಡಿಎಸ್ ಮುಖಂಡ ಶಾಸಕ ಎಚ್. ವಿಶ್ವನಾಥ್ ತಮ್ಮ ಸ್ನೇಹಿತರ ಜೊತೆ ಪ್ರವಾಸ ಕೈಗೊಂಡಿದ್ದಾರೆ.
ಬ್ರಹ್ಮಪುತ್ರ ನದಿ ತಡದಲ್ಲಿ ಸ್ನೇಹಿತರೊಂದಿಗೆ ವಿಹರಿಸುತ್ತಿರುವ ವಿಶ್ವನಾಥ್ ಸದ್ಯ ಹಾಲಿಡೇ ಮೂಡ್ ನಲ್ಲಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆ ತಲೆಕೆಡಿಸಿಕೊಳ್ಳದ ವಿಶ್ವನಾಥ್ ಮುಂದಿನ ನಡೆ ಎಲ್ಲರಲ್ಲೂ ಕೂತೂಹಲ ಮೂಡಿಸಿದೆ,
ಕುರುಬ ಸಮುದಾಯದ ಪ್ರಮುಖ ನಾಯಕ ವಿಶ್ವನಾಥ್ ಇತ್ತೀಚೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಮುಖಂಡರು ಮತ್ತು ಸ್ನೇಹಿತರ ಕರೆಯ ಮೇರೆಗೆ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ನಗರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಶಾಸಕ ಸ್ಥಾನಕ್ಕೆ ಆನಂದ್‌ಸಿಂಗ್ ರಾಜೀನಾಮೆ ನೀಡುತ್ತಿದ್ದಂತೆ ಅದರ ಮಾಸ್ಟರ್‌ಮೆಂಡ್ ವಿಶ್ವನಾಥ್ ಎಂಬ ವಂದಂತಿಗಳ ಹಬ್ಬಿದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ್ದರು.
ಯಾವುದೇ ಶಾಸಕರ ರಾಜೀನಾಮೆಗೂ, ನನಗೂ ಸಂಬಂಧ ಇಲ್ಲ. ನಾನಂತೂ ರಾಜೀನಾಮೆ ನೀಡುವುದಿಲ್ಲ. ನಾನು ಮಾಸ್ಟರ್ ಮೈಂಡ್ ಎಂಬುದು ಸತ್ಯಕ್ಕೆ ದೂರವಾದದ್ದು. ಜೆಡಿಎಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


