'ನಾನು ರಾಜಿನಾಮೆ ನೀಡಲು ಬಂದಿದ್ದೇನೆ: ಕಟ್ಟಿ ಬೆಳೆಸಿದ ಪಕ್ಷ ಬಿಡಲು ನೋವಾಗುತ್ತಿದೆ'
ನಾನು ರಾಜಿನಾಮೆ ನೀಡುತ್ತಿದ್ದೇನೆ, ಆದರೆ ಪಕ್ಷ ಬಿಡಲು ನನಗೆ ನೋವಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ...

Published On :
ಬೆಂಗಳೂರು: ನಾನು ರಾಜಿನಾಮೆ ನೀಡುತ್ತಿದ್ದೇನೆ, ಆದರೆ ಪಕ್ಷ ಬಿಡಲು ನನಗೆ ನೋವಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಜಿನಾಮೆ ನೀಡಲು ವಿಧಾನಸೌಧಕ್ಕೆ ಆಗಮಿಸಿದ ರಾಮಲಿಂಗಾರೆಡ್ಡಿ, ಸ್ಪೀಕರ್ ಗೆ ರಾಜಿನಾಮೆ ನೀಡಲು ಬಂದಿದ್ದೇನೆ, ಆದರೆ ತಮ್ಮ ಪುತ್ರಿ ಸೌಮ್ಯಾ ರೆಡ್ಡಿ ರಾಜಿನಾಮೆ ಬಗ್ಗೆ ನನಗೇನು ತಿಳಿದಿಲ್ಲ, ನೀವು ಅವರನ್ನೇ ಕೇಳಿ ಎಂದು ಹೇಳಿದ್ದಾರೆ.
ನಾನು ಯಾರನ್ನೂ ನಿಂದಿಸಲು ಬಯಸುವುದಿಲ್ಲ, ಇದಕ್ಕೆ ಪಕ್ಷದ ಹೈಕಮಾಂಡ್ ಅನ್ನು ನಾನು ಬೈಯ್ಯುವುದಿಲ್ಲ, ಕೆಲವು ವಿಷಯಗಳಲ್ಲಿ ನನ್ನನ್ನು ಪಕ್ಷ ನಿರ್ಲಕ್ಷ್ಯಿಸುತ್ತಿದೆ, ಹೀಗಾಗಿ ನಾನು ರಾಜಿನಾಮೆ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.
ಕಾಲೇಜು ದಿನಗಳಿಂದಲೂ ನಾನು ಕಾಂಗ್ರೆಸ್ ನಲ್ಲಿದ್ದನು, 7 ಬಾರಿ ಶಾಸಕನಾಗಿದ್ದೆ ಎಂದು ಹೇಳಿರುವ ಅವರು, ರಾಜಿನಾಮೆ ನೀಡಬಾರದೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನನ್ನ ಮನವೊಲಿಸಲು ಬಂದಿದ್ದರು, ಆದರೆ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಅವರಿಗೆ ತಿಳಿಸಿದ್ದಾರೆ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Ramalinga ReddyResignationರಾಜಿನಾಮೆಸಮ್ಮಿಶ್ರ ಸರ್ಕಾರರಾಮಲಿಂಗಾ ರೆಡ್ಡಿcoalition government
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


