ಆಪರೇಷನ್ ಕಮಲ 2.0 : ಸಮ್ಮಿಶ್ರ ಸರ್ಕಾರ ಪತನದ ಹಿಂದೆ ಕೇಂದ್ರ ಸಚಿವರ ಕೈವಾಡ- ಮೂಲಗಳು
ರಾಜ್ಯ ಸಮ್ಮಿಶ್ರ ಸರ್ಕಾರದ ಪತನಗೊಳಿಸುವ ಹಿಂದೆ ಕೇಂದ್ರದ ಹಾಲಿ ಸಚಿವರೊಬ್ಬರ ಕೈವಾಡವಿದೆ ಎಂಬಂತಹ ಮಾಹಿತಿ ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದುಬಂದಿದೆ.

Published On :
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪತನಗೊಳಿಸುವ ಹಿಂದೆ ಕೇಂದ್ರದ ಹಾಲಿ ಸಚಿವರೊಬ್ಬರ ಕೈವಾಡವಿದೆ ಎಂಬಂತಹ ಮಾಹಿತಿ ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಆ ಸಚಿವರು ರಾಜಕೀಯ ಬೆಳವಣಿಗೆಯ ಇಂಚಿಂಚು ಮಾಹಿತಿಯನ್ನು ಪಡೆಯುತ್ತಿದ್ದು, ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಇಬ್ಬರು ನಿಷ್ಠಾವಂತ ಮುಖಂಡರು ಯುಬಿ ಸಿಟಿ ಹೋಟೆಲ್ ನಲ್ಲಿ ಅತೃಪ್ತ ಶಾಸಕರೊಂದಿಗೆ ಸಭೆಯನ್ನು ಆಯೋಜಿಸಿದ್ದಾರೆ. ನಂತರ ಪ್ರತ್ಯೇಕವಾಗಿ ಉಭಯ ಪಕ್ಷಗಳ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನು ಮುಂಚಿತವಾಗಿಯೇ ಯೋಚಿಸಲಾಗಿದ್ದು, ಸಮಯವನ್ನು ಕೂಡಾ ಮುಂಚಿತವಾಗಿಯೇ ನಿಗದಿಪಡಿಸಲಾಗಿದೆ ಎಂದು ಮತ್ತೊಂದು ಮೂಲದಿಂದ ತಿಳಿದುಬಂದಿದೆ.
ಪೋನ್ ಕದ್ದಾಲಿಕೆಯ ಭೀತಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಡಮ್ಮಿ ನಂಬರ್ ಗಳನ್ನು ಬಳಸಿಕೊಳ್ಳಲಾಗಿದ್ದು, ಕೋಡ್ ವರ್ಲ್ಡ್ಸ್ ಮೂಲಕ ಸಂಭಾಷಣೆ ನಡೆಸಲಾಗಿದೆ ಎನ್ನಲಾಗಿದೆ.
ರಾಜೀನಾಮೆ ನೀಡಿದ ಶಾಸಕರು ವಿಮಾನ ನಿಲ್ದಾಣದವರೆಗೂ ಬಸ್ ನಲ್ಲಿ ತೆರಳಿದ್ದು, ಮುಂಬೈಗೆ ಪ್ರಯಾಣಿಸಿದ್ದಾರೆ. ಮುಂಗಾರು ಅಧಿವೇಶನಕ್ಕೆ ಕೆಲ ದಿನಗಳು ಬಾಕಿ ಇರುವಂತೆಯೇ ನಡೆದಿರುವ ಈ ಆಪರೇಷನ್ ಕಮಲದಿಂದಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕೌಂಟ್ ಡೌನ್ ಶುರುವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


