ಒಟ್ಟಾರೇ 14 ಶಾಸಕರಿಂದ ಸ್ಪೀಕರ್ ಗೆ ರಾಜೀನಾಮೆ- ಎಚ್. ವಿಶ್ವನಾಥ್
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಒಟ್ಟಾರೇ 14 ಮಂದಿ ಶಾಸಕರು ಸ್ಪೀಕರ್ ಗೆ ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಶಾಸಕ ಹೆಚ್. ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.

Published On :
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಒಟ್ಟಾರೇ 14 ಮಂದಿ ಶಾಸಕರು ಸ್ಪೀಕರ್ ಗೆ ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಶಾಸಕ ಹೆಚ್. ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.
ರಾಜಭವನದಲ್ಲಿಂದು ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ. ಉಭಯ ಪಕ್ಷಗಳ ಶಾಸಕರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.ಸರ್ಕಾರದ ನಡೆ , ಧೋರಣೆ ವಿರುದ್ಧ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.
ಉಭಯ ಪಕ್ಷಗಳ ಶಾಸಕರ ನಡುವೆ ಸಮನ್ವಯ ಸಾಧಿಸುವ ವಿಚಾರದಲ್ಲೂ ಮುಖಂಡರು ವಿಫಲವಾಗಿದ್ದಾರೆ. ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ.ಈ ಎಲ್ಲಾ ಕಾರಣಗಳಿಂದ ತಮ್ಮ ಇಚ್ಚೆನುಸಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.
ಎಲ್ಲಾ ಅತೃಪ್ತ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇವೆ. ರಾಜೀನಾಮೆ ಅಂಗೀಕರಿಸುವಂತೆ ರಾಜ್ಯಪಾಲರಿಗೆ ಪ್ರತ್ಯೇಕವಾಗಿ ಪತ್ರ ಬರೆದು ಮನವಿ ಮಾಡಿದ್ದೇವೆ. ಸ್ಪೀಕರ್ ಕೂಡಾ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ಆಪರೇಷನ್ ಕಮಲಕ್ಕೆ ಬಲಿಯಾಗಿ ರಾಜೀನಾಮೆ ನೀಡಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


