ರಿವರ್ಸ್ ಆಪರೇಷನ್ ಭೀತಿ: ತುರ್ತು ಬಿಜೆಪಿ ಶಾಸಕಾಂಗ ಸಭೆ ಕರೆದ ಯಡಿಯೂರಪ್ಪ
ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ - ಜೆಡಿಎಸ್ ನಾಯಕರು ರಿವರ್ಸ್ ಆಪರೇಷನ್ ಸೇರಿದಂತೆ ಎಲ್ಲಾ ರೀತಿಯ ತಂತ್ರಗಾರಿಕೆ ಬಳಸಲು...

Published On :
ಬೆಂಗಳೂರು: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ - ಜೆಡಿಎಸ್ ನಾಯಕರು ರಿವರ್ಸ್ ಆಪರೇಷನ್ ಸೇರಿದಂತೆ ಎಲ್ಲಾ ರೀತಿಯ ತಂತ್ರಗಾರಿಕೆ ಬಳಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ತುರ್ತು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಮೈತ್ರಿ ಸರ್ಕಾರ ಪತನದತ್ತ ಸಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮುಂದಿನ ನಡೆ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲು ಬಿಜೆಪಿ ನಿರ್ಧರಿಸಿದೆ.
ಇಂದು ಸಂಜೆ ೫ ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದ್ದು ಎಲ್ಲಾ ಶಾಸಕರು ಸಭೆಗೆ ಹಾಜರಾಗುವಂತೆ ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಸುನಿಲ್ ಕುಮಾರ್ ಶಾಸಕರಿಗೆ ಸಂದೇಶ ರವಾನಿಸಿದ್ದಾರೆ.
ಬಿಜೆಪಿ ಶಾಸಕಾಂಗ ಸಭೆ ಬಳಿಕ ಬಿಜೆಪಿಯ 105 ಶಾಸಕರನ್ನು ಯಲಹಂಕದ ರುಮಡಾ ರೆಸಾರ್ಟ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೂಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


