ಕೊಡಗು ಬದಲು ದೇವನಹಳ್ಳಿಯ ರೆಸಾರ್ಟ್ ಗೆ ಜೆಡಿಎಸ್ ಶಾಸಕರು ಶಿಫ್ಟ್
ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೆ ಜೆಡಿಎಸ್ ಶಾಸಕರು ಕೊಡಗಿನ ರೆಸಾರ್ಟ್‍ಗೆ ಹೋಗಲು ಸಕಲ ಸಿದ್ಧತೆ ನಡೆಸಿದ್ದರು....

Published On :
ಬೆಂಗಳೂರು: ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೆ ಜೆಡಿಎಸ್ ಶಾಸಕರು ಕೊಡಗಿನ ರೆಸಾರ್ಟ್‍ಗೆ ಹೋಗಲು ಸಕಲ ಸಿದ್ಧತೆ ನಡೆಸಿದ್ದರು. ಆದರೆ ದಿಢೀರ್ ನಿರ್ಧಾರ ಬದಲಿಸಿದ ಜೆಡಿಎಸ್ ಶಾಸಕರು, ಕೊಡಗಿನ ಬದಲು ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಆಪರೇಷನ್ ಕಮಲದ ಭೀತಿಯಿಂದ ಜೆಡಿಎಸ್ ಶಾಸಕರನ್ನು ರಕ್ಷಿಸಲು ಸೋಮವಾರಪೇಟೆ ತಾಲೂಕಿನ ಪ್ಯಾಡಿಂಗ್ ಟನ್ ರೆಸಾರ್ಟ್‍ನಲ್ಲಿ ವಾಸ್ತವ್ಯಕ್ಕೆ ಕೊಠಡಿಗಳನ್ನು ಕಾಯ್ದಿರಿಸಲಾಗಿತ್ತು. ಅಲ್ಲಿ ಮೂರು ದಿನ ಉಳಿದುಕೊಳ್ಳಲು ಜೆಡಿಎಸ್ ನಾಯಕರು ನಿರ್ಧರಿಸಿದ್ದರು. ಆದರೆ ಮಡಿಕೇರಿಗೆ ಪ್ರಯಾಣಿಸಲು ತುಂಬ ಸಮಯ ಬೇಕು ಮತ್ತು ದಿಢೀರ್ ಬದಲಾವಣೆಯಾದರೆ ಬೆಂಗಳೂರಿಗೆ ವಾಪಸ್ ಬರುವುದು ಕಷ್ಟ ಎಂಬ ಕಾರಣಕ್ಕೆ ನಗರದ ದೇವನಹಳ್ಳಿಯ ಪ್ರೆಸ್ಟೀಜ್ ಗಾಲ್ಫ್ ಶೇರ್ ರೆಸಾರ್ಟಿಗೆ ಜೆಡಿಎಸ್ ಶಾಸಕರ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಶಾಸಕರು ತಂಗಿರುವ ರೆಸಾರ್ಟಿಗೆ ಪೊಲೀಸ್ ಸರ್ಪಗಾವಲು ಹಾಕಿದ್ದು, ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


