ರಾಜಕೀಯ ಬಿಕ್ಕಟ್ಟು : ರಾಮಲಿಂಗಾರೆಡ್ಡಿ ಭೇಟಿಯಾದ ಕುಮಾರಸ್ವಾಮಿ, ಮನವೊಲಿಕೆಗೆ ಯತ್ನ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ಅತೃಪ್ತ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡುವ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ.ಅಜ್ಞಾತ ಸ್ಥಳವೊಂದರಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

Published On :
ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ಅತೃಪ್ತ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡುವ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ.
ಅಜ್ಞಾತ ಸ್ಥಳವೊಂದರಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
11 ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ರಾಜೀನಾಮೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಬಿಕ್ಕುಟ್ಟು ತಲೆದೋರಿದ್ದು, 13 ತಿಂಗಳು ಆಡಳಿತ ನಡೆಸಿರುವ ಸಮ್ಮಿಶ್ರ ಸರ್ಕಾರ ಪತನದತ್ತ ಸಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವ ಪ್ರಶ್ನೆಯೇ ಇಲ್ಲ. ಬೆಂಗಳೂರಿಗೂ ವಾಪಾಸ್ ಹೋಗುವುದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
ಇಂತಹ ಸಂದಿಗ್ಧ ಸಮಯದಲ್ಲಿ ಅಮೆರಿಕಾದಿಂದ ನಿನ್ನೆ ಕುಮಾರಸ್ವಾಮಿ ವಾಪಾಸ್ ಆದ ನಂತರ ಉಭಯ ಪಕ್ಷಗಳ ನಾಯಕರು ಖಾಸಗಿ ಹೋಟೆಲ್ ವೊಂದರಲ್ಲಿ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಬೇಕೆಂಬ ಅತೃಪ್ತ ಶಾಸಕರ ಬೇಡಿಕೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಒಂದು ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೂ ನಮ್ಮದೇನೂ ಅಭ್ಯಂತರವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ. ಟಿ ದೇವೇಗೌಡ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ramalinga ReddyHD Kumaraswamyಭೇಟಿಎಚ್ ಡಿ ಕುಮಾರಸ್ವಾಮಿರಾಮಲಿಂಗಾರೆಡ್ಡಿKarnataka politicsMeet ರಾಜ್ಯ ರಾಜಕೀಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


