ಉಪಹಾರ ಸಭೆಗೆ ಗೈರಾದ ಸಚಿವ ಎಂಟಿಬಿ ನಾಗರಾಜ್ ಗೆ ಸಿದ್ದರಾಮಯ್ಯ ತರಾಟೆ
ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಹಾರ ಕೂಟದಿಂದ ವಸತಿ ಸಚಿವ ಎಂ ಟಿಬಿ ನಾಗರಾಜ್ ಸೇರಿದಂತೆ ನಾಲ್ವರು ಸಚಿವರು ದೂರ ಉಳಿದಿದ್ದಾರೆ.

Published On :
ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಹಾರ ಕೂಟದಿಂದ ವಸತಿ ಸಚಿವ ಎಂ ಟಿಬಿ ನಾಗರಾಜ್ ಸೇರಿದಂತೆ ನಾಲ್ವರು ಸಚಿವರು ದೂರ ಉಳಿದಿದ್ದಾರೆ.
ಈ ಮಾಹಿತಿ ತಿಳಿದು ಅಸಮಾಧಾನಗೊಂಡ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಎಂಬಿಟಿ ನಾಗರಾಜ್ ವರ್ತನೆ ಬಗ್ಗೆ ಕಿಡಿಕಾರಿದ್ದಾರೆ. ಅಲ್ಲದೇ ಅಲ್ಲದೇ ಪೋನ್ ಮಾಡುವ ಮೂಲಕ ಎಲ್ಲೇ ಇದ್ದರೂ ಉಪಹಾರ ಕೂಟಕ್ಕೆ ಆಗಮಿಸುವಂತೆ ಕಟ್ಟಪ್ಪಣೆ ಮಾಡಿದ್ದಾರೆ.
ಪೂರ್ವನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉಪಹಾರ ಕೂಟಕ್ಕೆ ಆಗಮಿಸಲು ಆಗಲಿಲ್ಲ ಎಂದು ಎಂಟಿಬಿ ನಾಗರಾಜ್ ಸಮಾಜಾಯಿಸಿ ನೀಡಿದ್ದಾರೆ.
ಈ ಉಪಹಾರ ಕೂಟದಲ್ಲಿ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಸಚಿವರು ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಿದ್ದರಾಮಯ್ಯಪರಮೇಶ್ವರ್ParameshwarKarnataka politicsಎಂಟಿಬಿ ನಾಗರಾಜ್ಉಪಹಾರ ಕೂಟbreakfast meetingSiddaramaiah ರಾಜ್ಯ ರಾಜಕೀಯMTB Nagaraja
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


