ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಚಿಂತನೆ ಬಿಜೆಪಿ ಮುಂದಿಲ್ಲ- ಅರವಿಂದ ಲಿಂಬಾವಳಿ
ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದ್ದಾರೆ.

Published On :
ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬವಾದರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಲಿದೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಅತೃಪ್ತ ಶಾಸಕರು ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಆದರೆ, ರಾಜೀನಾಮೆ ಕೊಟ್ಟರೆ ಸರ್ಕಾರ ಅಲ್ಪಮತಕ್ಕೆ ಕುಸಿಯಲಿದೆ. ಹೀಗಿರುವಾಗಿ ಸದನವನ್ನು ಹೇಗೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದರು.
ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬವಾದರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಲಿದೆ ಆದ್ದರಿಂದ ರಾಜ್ಯಪಾಲರಿಗೆ ಮಧ್ಯಪ್ರವೇಶಿಸುವಂತೆ ಆಗ್ರಹಿಸಲಿದ್ದೇವೆ ಎಂದ ಅರವಿಂದ ಲಿಂಬಾವಳಿ, ಮುಂದಿನ ಎಲ್ಲಾ ನಿರ್ಧಾರವನ್ನು ನಾಳೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಿಜೆಪಿಮೈತ್ರಿ ಸರ್ಕಾರcoalition governmentಅವಿಶ್ವಾಸ ನಿರ್ಣಯKarnataka politicsBJP ರಾಜ್ಯ ರಾಜಕೀಯNon Confidence Motion
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


