ಇಂದು ಕಾಂಗ್ರೆಸ್ ಶಾಸಕಾಂಗ ಸಭೆ : ಮೈತ್ರಿ ಸರ್ಕಾರ ಅಳಿವು ಉಳಿವಿನ ತೀರ್ಮಾನ
ಮೈತ್ರಿ ಸರ್ಕಾರ ಬಹುಮತ ಕಳೆದಕೊಂಡು ಸರ್ಕಾರ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ...

Published On :
ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳೆದಕೊಂಡು ಸರ್ಕಾರ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಮಂಗಳವಾರ ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ.ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯ ನೇತೃತ್ವವನ್ನು ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಶಾಸಕಾಂಗ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಹಿಸಿಕೊಳ್ಳಲಿದ್ದಾರೆ.
ಇಂದಿನ ಸಭೆಯಲ್ಲಿ ಆಪರೇಷನ್ ಕಮಲಕ್ಕೆ ಯಾರೂ ಒಳಗಾಗದಂತೆ ತಡೆಯುವುದು, ಅತೃಪ್ತ ಶಾಸಕರ ಮನವೊಲಿಸಿ ವಾಪಸ್ ಕರೆತರುವುದು,ಮೈತ್ರಿ ಸರ್ಕಾರವನ್ನು ರಕ್ಷಿಸಿಕೊಳ್ಳಲು ಶಾಸಕರು ಒಗ್ಗಟ್ಟು ಪ್ರದರ್ಶನ, ವಿಧಾನ ಸಭಾ ಅಧಿವೇಶನದಲ್ಲಿ ಮಹತ್ವದ ವಿಚಾರಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸುವುದು.ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾದರೆ ಸರ್ಕಾರ ವಿಸರ್ಜನೆ,ಮಧ್ಯಂತರ ಚುನಾವಣೆಗೆ ತೆರಳುವುದು, ಸರ್ಕಾರ ಪತನವಾದರೆ ವಿರೋಧ ಪಕ್ಷದಲ್ಲಿ ಕುಳಿತು ಆಡಳಿತ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸುವುದು ಸೇರಿದಂತೆ ಮಹತ್ವದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


