ನಾನೆಲ್ಲೂ ಹೋಗಿಲ್ಲ, ನನ್ನ ಭೇಟಿಗೆ ಯಾರೂ ಸಮಯ ಕೇಳಿಲ್ಲ; ಸ್ಪೀಕರ್ ರಮೇಶ್ ಕುಮಾರ್
ಇಂದು ನನ್ನ ಭೇಟಿಗೆ ಯಾರೂ ಸಮಯ ಕೇಳಿಲ್ಲ, ಯಾರು ಬಂದು ಬೇಕಾದ್ರೂ ರಾಜೀನಾಮೆ ಕೊಡಲಿ...

Published On :
ಬೆಂಗಳೂರು: ಇಂದು ನನ್ನ ಭೇಟಿಗೆ ಯಾರೂ ಸಮಯ ಕೇಳಿಲ್ಲ, ಯಾರು ಬಂದು ಬೇಕಾದ್ರೂ ರಾಜೀನಾಮೆ ಕೊಡಲಿ. ಇಂದು ರಾಜೀನಾಮೆ ಪತ್ರಗಳನ್ನು ಪರಿಶೀಲಿಸ್ತೀನಿ ಕ್ಷೇತ್ರದ ಜನ ಕೊಟ್ಟ ದೂರುಗಳನ್ನೂ ಪರಿಶೀಲಿಸಬೇಕು ಜನರ ಹಿತಾಸಕ್ತಿಯನ್ನು ಕಡೆಗಣಿಸುವುದು ತಪ್ಪು ಎಂದು ಬೆಂಗಳೂರಿನಲ್ಲಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ದೊಮ್ಮಲೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಗೆ ಎಂದಿನ ಕಚೇರಿ ಸಮಯಕ್ಕೆ ತೆರಳುತ್ತೇನೆ. ಮೈತ್ರಿಯ ಭವಿಷ್ಯದ ದೃಷ್ಟಿಯಿಂದ ಇಂದು ಮಹತ್ವದ ದಿನವಾಗಿದೆ, ನಾನೆಲ್ಲೂ ಅಜ್ಞಾತ ಸ್ಥಳಕ್ಕೆ ಹೋಗಿಲ್ಲ, ಬೆಂಗಳೂರಿನಲ್ಲಿಯೇ ಇದ್ದೇನೆ. ಇನ್ನು ಸ್ವಲ್ಪ ಹೊತ್ತಿನಲ್ಲಿ ಕಚೇರಿಗೆ ತೆರಳುತ್ತೇನೆ ಎಂದರು.
ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡು ಸರ್ಕಾರ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ 12 ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನೀಡಿರುವ ರಾಜೀನಾಮೆ ಬಗ್ಗೆ ವಿಧಾನಸಭಾಧ್ಯಕ್ಷ ಆರ್ ರಮೇಶ್ ಕುಮಾರ್ ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಎಂಬುದು ರಾಜಕೀಯದ ತೀವ್ರ ಕೂತೂಹಲಕ್ಕೆ ಕಾರಣವಾಗಿದೆ.
ಹೀಗಾಗಿ ಇಂದಿನ ರಾಜಕೀಯ ಬೆಳವಣಿಗೆ ಸ್ಪೀಕರ್ ಅಂಗಳದಲ್ಲಿ ನಡೆಯಲಿರುವ ಬೆಳವಣಿಗೆ ಮೇಲೆ ಅವಲಂಬಿತವಾಗಿದೆ .ಇದರ ಜೊತೆಗೆ ಇಂದು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಮುಂದಿನ ಬೆಳವಣಿಗೆಗೆ ಹಾದಿ ಮಾಡಿಕೊಡಲಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


