ಬೆಂಗಳೂರು: ಸರ್ಕಾರಕ್ಕೆ ಸಂಕಷ್ಟ, ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ
ಮೈತ್ರಿ ಸರ್ಕಾರದ ಅಸ್ಥಿರ ಗೊಳಿಸಲು ಬಿಜೆಪಿ ಹಲವು ಬಗೆಯ ತಂತ್ರ ಹೆಣೆದಿರುವ ಆರೋಪ ಹೊರಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

Published On :
ಬೆಂಗಳೂರು: . ಮೈತ್ರಿ ಸರ್ಕಾರದ ಅಸ್ಥಿರ ಗೊಳಿಸಲು ಬಿಜೆಪಿ ಹಲವು ಬಗೆಯ ತಂತ್ರ ಹೆಣೆದಿರುವ ಆರೋಪ ಹೊರಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಚಿವೆ ಜಯಮಾಲಾ ಸೇರಿ ಹಲವಾರು ಮುಖಂಡರು ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ನವದೆಹಲಿಯಲ್ಲಿ ಸಹ ಕರ್ನಾಟಕದ ರಾಜಕೀಯ ಅತಂತ್ರಸ್ಥಿತಿಯನ್ನು ವಿರೋಧಿಸಿ ಕಾಂಗ್ರೆಸ್ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದೆ. ಇದರ ಮೂಲಕ ದೇಶದ ಜನರ ಗಮನ ಸೆಳೆಯುವ ಯತ್ನವನ್ನು ಕೈ ಪಕ್ಷ ಮಾಡುತ್ತಿದೆ.
ರಾಜ್ಯದ ರಾಯಚೂರು, ಕಲಬುರ್ಗಿ ಸೇರಿ ಹಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೆ ಇತ್ತ ಬೆಂಗಳೂರಿನ ರಾಜಭವನದ ಎದುರು ಸಹ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


