ನಿರ್ಣಾಯಕ ಘಟ್ಟದಲ್ಲಿ ಮೈತ್ರಿ ಸರ್ಕಾರದ ಅಸ್ತಿತ್ವ: ವಿಧಾನಸೌಧಕ್ಕೆ ಸ್ಪೀಕರ್ ಆಗಮನ; ರಾಜೀನಾಮೆ ಅಂಗೀಕಾರದ ಬಗ್ಗೆ ಹೇಳಿದ್ದಿಷ್ಟು
ವಿಧಾನಸೌಧಕ್ಕೆ ಸ್ಪೀಕರ್ ರಮೇಶ್ ಕುಮಾರ್ ಆಗಮಿಸಿದ್ದು, ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಪ್ರಾರಂಭವಾಗಿದ್ದ ರಾಜಕೀಯ ಹೈಡ್ರಾಮ ಜೂ.09 ರಂದು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆಗಳಿವೆ.

Published On :
ವಿಧಾನಸೌಧಕ್ಕೆ ಸ್ಪೀಕರ್ ರಮೇಶ್ ಕುಮಾರ್ ಆಗಮಿಸಿದ್ದು, ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಪ್ರಾರಂಭವಾಗಿದ್ದ ರಾಜಕೀಯ ಹೈಡ್ರಾಮ ಜೂ.09 ರಂದು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆಗಳಿವೆ.
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ರಮೇಶ್ ಕುಮಾರ್ ಮಾತನಾಡಿದ್ದು, ಶಾಸಕರ ಈಗಾಗಲೇ ಸಲ್ಲಿಸಿರುವ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಶಾಸಕರು ಸಲ್ಲಿಸಿರುವ ರಾಜೀನಾಮೆ ಪ್ರತಿ ನೋಡಿದರೆ ಗೊತ್ತಾಗಲಿದೆ. ಕಚೇರಿಗೆ ತೆರಳಿ ರಾಜೀನಾಮೆ ಪರಿಶೀಲನೆ ಮಾಡಬೇಕು, ರೂಲ್ ಬುಕ್ ನೋಡಿ ಆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಶಾಸಕರ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಒತ್ತಡದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಮೇಶ್ ಕುಮಾರ್ ನನ್ನ ಸಂವಿಧಾನವೇ ನನಗೆ ನಾಯಕ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnataka politicsCongress-JDS Governmentಕಾಂಗ್ರೆಸ್-ಜೆಡಿಎಸ್ ಸರ್ಕಾರSpeaker Ramesh kumarಶಾಸಕರ ರಾಜೀನಾಮೆMLAs resignationಕರ್ನಾಟಕ ರಾಜಕೀಯ ಬಿಕ್ಕಟ್ಟುಸ್ಪೀಕರ್ ರಮೆಶ್ ಕುಮಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


