ರಾಜಕೀಯ

ಸಿಎಲ್ ಪಿ ಸಭೆಗೆ 10 ಶಾಸಕರ ಚಕ್ಕರ್: ದೋಸ್ತಿ ಕಡಿದುಕೊಳ್ಳಲು ಕೈ ಶಾಸಕರ ಒತ್ತಾಯ?

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ 57 ಶಾಸಕರು ಹಾಜರಾಗಿದ್ದು, ಹಲವು ಶಾಸಕರು ಗೈರು ಹಾಜರಾಗಿರುವುದು ಇದೀಗ ..

ಸಿಎಲ್ ಪಿ ಸಭೆಗೆ  10 ಶಾಸಕರ ಚಕ್ಕರ್:  ದೋಸ್ತಿ ಕಡಿದುಕೊಳ್ಳಲು ಕೈ ಶಾಸಕರ ಒತ್ತಾಯ?
ಕಾಂಗ್ರೆಸ್ ಶಾಸಕಾಂಗ ಸಭೆ
Published On :
ಬೆಂಗಳೂರು: ಮಾಜಿ ಸಿಎಂ  ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ  ಕಾಂಗ್ರೆಸ್ ಶಾಸಕಾಂಗ ಸಭೆಗೆ 57 ಶಾಸಕರು ಹಾಜರಾಗಿದ್ದು, ಹಲವು ಶಾಸಕರು ಗೈರು ಹಾಜರಾಗಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಒಟ್ಟು ಎಂಟು ಮಂದಿ ಶಾಸಕರು ಗೈರು ಹಾಜರಾಗಿದ್ದು, ಇದರಲ್ಲಿ ಆರು ಮಂದಿ ಶಾಸಕರು ಗೈರು ಹಾಜರಿಗೆ ಕಾರಣ ನೀಡಿದ್ದಾರೆ ಎಂದು ವರದಿ ತಿಳಿಸಿದೆ. 
ಸಂಡೂರು ಶಾಸಕ ಇ.ತುಕಾರಾಂ, ಶ್ಯಾಮನೂರು ಶಿವಶಂಕರಪ್ಪ, ಅಂಜಲಿ ನಿಂಬಾಳ್ಕರ್, ಡಾ.ಸುಧಾಕರ್, ಎಂಟಿಬಿ ನಾಗರಾಜ್, ರಾಜೇಗೌಡ, ಖನಿಜಾ ಫಾತಿಮಾ, ರೋಷನ್ ಬೇಗ್ ಸಭೆಗೆ ಗೈರಾಗಿದ್ದಾರೆ.
ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ, ಬಳ್ಳಾರಿ ಗ್ರಾಮೀಣದ ನಾಗೇಂದ್ರ, ಭದ್ರಾವತಿ ಶಾಸಕ ಸಂಗಮೇಶ್ ಕೂಡಾ ಸಭೆಗೆ ಗೈರಾಗಿದ್ದರು. ಇನ್ನೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದವರು  ಬರಲಿಲ್ಲ.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಗದ್ದಲ ಉಂಟಾಗಿ ಜೆಡಿಎಸ್ ಜೊತೆಗಿನ ಮೈತ್ರಿ ಕಡೆದುಕೊಂಡು ಪ್ರತಿಪಕ್ಷ ಸ್ಥಾನದಲ್ಲಿ ಕೂರುವಂತೆ ಶಾಸಕರು ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.