ರಾಜಿನಾಮೆ ತುರ್ತು ಅಂಗೀಕಾರವಿಲ್ಲ: 'ಬಂಡು' ಕೋರ ಶಾಸಕರಿಗೆ ಸ್ಪೀಕರ್ ಶಾಕ್!
ಸಮ್ಮಿಶ್ರ ಸರ್ಕಾರವನ್ನು ಉಳಿಸಲು ಶಾಸಕ ಸ್ಥಾನಕ್ಕೆ ರಾಜಿನಾಮೆ ನಡಿ ಮುಂಬೈಗೆ ಹಾರಿರುವ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಶಾಕ್ ನೀಡಿದ್ದಾರೆ....

Published On :
ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಲು ಶಾಸಕ ಸ್ಥಾನಕ್ಕೆ ರಾಜಿನಾಮೆ ನಡಿ ಮುಂಬೈಗೆ ಹಾರಿರುವ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಶಾಕ್ ನೀಡಿದ್ದಾರೆ.
ಅತೃಪ್ತ ಶಾಸಕರು ನೀಡಿರುವ ರಾಜಿನಾಮೆಯನ್ನು ತುರ್ತಾಗಿ ಅಂಗೀಕರಿಸಲು ಸಾಧ್ಯವಿಲ್ಲ, ಸಂವಿಧಾನದ ಪ್ರಕಾರ, ನೀತಿ ನಿಯಮದ ಪ್ರಕಾರ ಶಾಸಕರ ಖುದ್ದು ಭೇಟಿಯಾಗಿ ರಾಜಿನಾಮೆ ನೀಡಬೇಕ, ಆ ನಂತರ ಅಂಗೀಕಾರ ಪ್ರಕ್ರಿಯೆ ನಡೆಸಲಿದ್ದೇನೆ, ಪ್ರತಿಯೊಬ್ಬ ಅತೃಪ್ತ ಶಾಸಕರನ್ನು ಕರೆದು ಮಾತನಾಡಿ ಚರ್ಚಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ಇನ್ನೂ ಸ್ಪೀಕರ್ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಅತೃಪ್ತ ಶಾಸಕರು, ನಾವು ಸ್ಪೀಕರ್ ನಿರ್ಧಾರಕ್ಕೆ ಬದ್ದವಾಗಿದ್ದೇವೆ, ಅವರು ಕರೆದ ಕೂಡಲೇ ನಾವು ವಾಪಸ್ ಬರುವುದಾಗಿ ವಿಶ್ವನಾಥ್ ಹೇಳಿದ್ದಾರೆ. ಸ್ಪೀಕರ್ ಮೇಲೆ ನಮಗೆ ಅಪಾರ ಗೌರವವಿದೆ, ನಮ್ಮ ರಾಜಿನಾಮೆ ಅಂಗೀಕರಿಸುತ್ತಾರೆ ಎಂಬ ಭರವಸೆ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


