ರಾಜ್ಯಪಾಲರು ಬಿಜೆಪಿಯ ಏಜೆಂಟ್: ದಿನೇಶ್ ಗುಂಡೂರಾವ್ ಆರೋಪ
ಶಾಸಕರ ರಾಜೀನಾಮೆ ವಿಚಾರವನ್ನು ಆದಷ್ಟು ಬೇಗ ಇತ್ಯರ್ಥ ಮಾಡಿ ಎಂದು ಸ್ಪೀಕರ್ ಗೆ ರಾಜ್ಯಪಾಲರು ಒತ್ತಾಯ ಮಾಡಿದ್ದಾರೆ. ಗವರ್ನರ್ ಬಿಜೆಪಿಯ ಏಜೆಂಟ್ ರೀತಿ ...

Published On :
ಬೆಂಗಳೂರು: ಶಾಸಕರ ರಾಜೀನಾಮೆ ವಿಚಾರವನ್ನು ಆದಷ್ಟು ಬೇಗ ಇತ್ಯರ್ಥ ಮಾಡಿ ಎಂದು ಸ್ಪೀಕರ್ ಗೆ ರಾಜ್ಯಪಾಲರು ಒತ್ತಾಯ ಮಾಡಿದ್ದಾರೆ. ಗವರ್ನರ್ ಬಿಜೆಪಿಯ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಕುಮಾರ ಕೃಪ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ರಾಜಭವನವನ್ನ ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಡಿ ಕೆ ಶಿವಕುಮಾರ್ ಅವರಿಗೆ ಹೋಟೆಲ್ ಬಳಿ ತಡೆ ಒಡ್ಡಿದ್ದಾರೆ.
ಬಿಜೆಪಿ ಪಕ್ಷದವರು ಏನು ಮಾಡುತ್ತಿದ್ದಾರೆ ಅಂತ ಗೊತ್ತಾಗುತ್ತಿದೆ. ಮುಂಬಯಿಯಲ್ಲಿರುವ ಹೋಟೆಲ್ ಸರ್ಕಾರಿ ಜಾಗ ಅಲ್ಲ. ಅದು ಖಾಸಗಿ ಹೋಟೆಲ್, ಡಿ ಕೆ ಶಿವಕುಮಾರ್ ಅಲ್ಲಿ ರೂಂ ಬುಕ್ ಮಾಡಿದ್ದಾರೆ ಆದರೂ ಅವರಿಗೆ ಒಳ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಆಪರೇಷನ್ ಕಮಲಕ್ಕೆ ಕೋಟಿ ಕೋಟಿ ಹಣ ಎಲ್ಲಿಂದ ಬರುತ್ತಿದೆ ಎಂದು ಪ್ರಶ್ನಿಸಿದ ಅವರು, ಅತೃಪ್ತರು ಸುಪ್ರೀಂ ಕೋರ್ಟ್ ಹೋಗೋದಕ್ಕೆ ಸ್ವಂತಂತ್ರರು ಎಂದು ಹೇಳಿದ್ದಾರೆ, ನಮ್ಮ ಸ್ಪೀಕರ್ ರಮೇಶ್ ಕುಮಾರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


