ರಾಜಕೀಯ

ಕರ್ನಾಟಕದಲ್ಲಿ ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ: ಮಮತಾ ಬ್ಯಾನರ್ಜಿ

ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕರ್ನಾಟಕದಲ್ಲಿ ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Published On :
ಬೆಂಗಳೂರು/ಕೋಲ್ಕತಾ: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಿಜೆಪಿ ಅಧಿಕಾರದಾಸೆಗೆ ಶಾಸಕರನ್ನು ಖರೀದಿಸುವ ಮೂಲಕ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.
ಮುಂಬೈನಲ್ಲಿ ಕಾಂಗ್ರೆಸ್ ಶಾಸಕರನ್ನು ಕೂಡಿಹಾಕಲಾಗಿದ್ದು, ಅವರನ್ನು ಭೇಟಿ ಮಾಡಲು  ಕಾಂಗ್ರೆಸ್ ನಾಯಕರಿಗೆ ಮತ್ತು ಮಾಧ್ಯಮಗಳಿಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂಬುದು ಮಾಧ್ಯಮಗಳ ವರದಿಯಿಂದ ನಮಗೆ ತಿಳಿದು ಬಂತು. ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ದೀದಿ ದೂರಿದರು.
ಇತ್ತೀಚಿಗಷ್ಟೇ ಲೋಕಸಭೆ ಚುನಾವಣೆಯ ಗೆಲುವು ಸಾಧಿಸಿರುವ ಬಿಜೆಪಿ ಕೇಂದ್ರದಲ್ಲಿ ಸರ್ಕಾರ ನಡೆಸುವ ಬಗ್ಗೆ ಗಮನ ಹರಿಸಲಿ. ಅದು ಬಿಟ್ಟು ಈ ಕೊಳಕು ರಾಜಕೀಯ ಮಾಡುತ್ತೀರುವುದು ಏಕೆ? ಎಂದು ಪಶ್ಚಿಮ ಬಂಗಾಳ ಸಿಎಂ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.