ಸ್ಪೀಕರ್‌ಗೆ ಟಕ್ಕರ್: ಸುಪ್ರೀಂಕೋರ್ಟ್ ಗೆ ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು!
ನಮ್ಮ ರಾಜಿನಾಮೆಯನ್ನು ಅಂಗೀಕರಿಸಲು ಬೇಕು ಅಂತಲೆ ವಿಳಂಬ ಮಾಡಲಾಗುತ್ತಿದೆ ಎಂದು ಮುಂಬೈನಲ್ಲಿರುವ ಅತೃಪ್ತ ಶಾಸಕರು ಸ್ಪೀಕರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

Published On :
ನವದೆಹಲಿ: ನಮ್ಮ ರಾಜಿನಾಮೆಯನ್ನು ಅಂಗೀಕರಿಸಲು ಬೇಕು ಅಂತಲೆ ವಿಳಂಬ ಮಾಡಲಾಗುತ್ತಿದೆ ಎಂದು ಮುಂಬೈನಲ್ಲಿರುವ ಅತೃಪ್ತ ಶಾಸಕರು ಸ್ಪೀಕರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಸುಪ್ರೀಂಕೋರ್ಟ್ ಸಿಜೆ ಪೀಠದ ಮುಂದೆ ನಾಳೆ ವಿಚಾರಣೆ ನಡೆಯಲಿದೆ.
ಅತೃಪ್ತರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅರ್ಜಿ ಸಲ್ಲಿಸಿದ್ದು ಸಿಜೆ ಪೀಠದ ಮುಂದೆ ವಾದ ಮಂಡಿಸಲಿದ್ದಾರೆ.
ನಿನ್ನೆ ಅತೃಪ್ತ ಶಾಸಕರ ರಾಜಿನಾಮೆ ಪತ್ರವನ್ನು ಪರಿಶೀಲನೆ ನಡೆಸಿದ ರಮೇಶ್ ಕುಮಾರ್ ಅವರು 5 ರಾಜಿನಾಮೆ ಪತ್ರ ಸರಿಯಾಗಿದೆ. ಇನ್ನು 8 ಅಪೃಪ್ತ ಶಾಸಕರ ರಾಜಿನಾಮೆ ಕ್ರಮಬದ್ಧವಾಗಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್Congressಕಾಂಗ್ರೆಸ್JDSKarnatakaಕರ್ನಾಟಕಜೆಡಿಎಸ್Ramesh Kumarರಮೇಶ್ ಕುಮಾರ್ಅತೃಪ್ತ ಶಾಸಕರುRebel Mla
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


