ರಾಜಕೀಯ

ಯಾರನ್ ಕೇಳಿ ಮುಂಬೈಗೆ ಹೋದರು? ಡಿಕೆ ಶಿವಕುಮಾರ್ ನಡೆಗೆ ಸಿದ್ದರಾಮಯ್ಯ ಅಸಮಾಧಾನ!

ಏನೇ ಆಗಲಿ ಅತೃಪ್ತರನ್ನು ಮನವೊಲಿಸಿ ಕರೆತರುತ್ತೇನೆ ಎಂದು ದಿಢೀರ್ ಮುಂಬೈಗೆ ತೆರಳಿದ ಟ್ರಬಲ್ ಶೂಟರ್ ಖ್ಯಾತಿಯ ಡಿಕೆ ಶಿವಕುಮಾರ್ ನಡೆಗೆ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ...

ಯಾರನ್ ಕೇಳಿ ಮುಂಬೈಗೆ ಹೋದರು? ಡಿಕೆ ಶಿವಕುಮಾರ್ ನಡೆಗೆ ಸಿದ್ದರಾಮಯ್ಯ ಅಸಮಾಧಾನ!
ಡಿಕೆ ಶಿವಕುಮಾರ್-ಸಿದ್ದರಾಮಯ್ಯ
Published On :
ಬೆಂಗಳೂರು: ಏನೇ ಆಗಲಿ ಅತೃಪ್ತರನ್ನು ಮನವೊಲಿಸಿ ಕರೆತರುತ್ತೇನೆ ಎಂದು ದಿಢೀರ್ ಮುಂಬೈಗೆ ತೆರಳಿದ ಟ್ರಬಲ್ ಶೂಟರ್ ಖ್ಯಾತಿಯ ಡಿಕೆ ಶಿವಕುಮಾರ್ ನಡೆಗೆ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂಬೈಗೆ ತೆರಳಿರುವ ಡಿಕೆಶಿ ಅವರನ್ನು ಮಹಾರಾಷ್ಟ್ರ ಸರ್ಕಾರ ನಡೆಸಿಕೊಂಡಿರುವ ರೀತಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಇನ್ನು ಡಿಕೆ ಶಿವಕುಮಾರ್ ಯಾರನ್ನು ಕೇಳಿ ಮುಂಬೈಗೆ ಹೋದರು ಎಂದು ಆಪ್ತರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಮುಂಬೈಗೆ ಹೋಗುವ ಮೂಲಕ ಪಕ್ಷದ ಮರ್ಯಾದೆ ಕಳೆದಿದ್ದಾರೆ. ಇದೇನು ಒನ್ ಮ್ಯಾನ್ ಶೋನಾ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದುಬಂದಿದೆ. 
ಮುಂಬೈನ ರಿನೈಸರ್ಸ್ ಹೊಟೇಲ್ ಒಳಗೆ ಹೋಗಲು ಡಿಕೆ ಶಿವಕುಮಾರ್ ಅವರನ್ನು ಬಿಟ್ಟಿಲ್ಲ. ಇನ್ನು ಅತೃಪ್ತ ಶಾಸಕರು ಮುಂಬೈ ಪೊಲೀಸ್ ಆಯುಕ್ತರಿಗೆ ಭದ್ರತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇದೆಲ್ಲಾ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ. ಹೀಗಿರುವಾಗ ಕೇವಲ ಮುಖ್ಯಮಂತ್ರಿಯ ಗಮನಕ್ಕೆ ತಂದು ಪಕ್ಷದ ನಾಯಕರಿಗೂ ಹೇಳದೇ ಹೋಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.