ಸ್ಪೀಕರ್ ಅನುಭವಿಗಳು, ಕಾನೂನಿನ ಪ್ರಕಾರ ನಡೆಯುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ಸ್ಪೀಕರ್ ರಮೇಶ್ ಕುಮಾರ್ ಅವರು ತಿಳುವಳಿಕೆ ಉಳ್ಳವರು, ಅನುಭವಿಗಳು. ಅವರು ಅತೃಪ್ತ ಶಾಸಕರ ರಾಜೀನಾಮೆ ಬಿಕ್ಕಟ್ಟು ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Published On :
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ತಿಳುವಳಿಕೆ ಉಳ್ಳವರು, ಅನುಭವಿಗಳು. ಅವರು ಅತೃಪ್ತ ಶಾಸಕರ ರಾಜೀನಾಮೆ ಬಿಕ್ಕಟ್ಟು ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕರು ಇಂದು ಸಂಜೆ ಆರು ಗಂಟೆಯೊಳಗೆ ಹಾಜರಾಗಿ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಅದರಂತೆ ಶಾಸಕರು ಇಂದು ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಸ್ಪೀಕರ್ ಅವರು ಸಂವಿಧಾನದ 192 ವಿಧಿ ಮತ್ತು ಶೆಡ್ಯೂಲ್ಡ್ 10ರ ಪ್ರಕಾರ ಯಾವೆಲ್ಲಾ ಸಾಧ್ಯತೆಗಳಿವೆಯೋ ಅವೆಲ್ಲವನ್ನೂ ಪರಿಶೀಲಿಸಲಿದ್ದಾರೆ. ಅವರು ಸಾಕಷ್ಟು ಕಾನೂನು ತಿಳುವಳಿಕೆ ಇರುವವರು. ಕಾನೂನಿಗೆ ಅನುಗುಣವಾಗಿ ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mallikarjun khargeKarnataka politicsಕರ್ನಾಟಕ ರಾಜಕೀಯSpeaker Ramesh kumarಸ್ಪೀಕರ್ ರಮೇಶ್ ಕುಮಾರ್ಮಲ್ಲಿಕರ್ಜುನ್ ಖರ್ಗೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


