ರಾಜಕೀಯ

ಅಂತಿಮ ಕ್ಷಣದವರೆಗೂ ಹೋರಾಟ ನಡೆಸುತ್ತೇವೆ: ಸಮ್ಮಿಶ್ರ ಸರ್ಕಾರ ಮುಖಂಡರು

ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳ ಶಾಸಕರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಬುಡ ಅಲ್ಲಾಡುತ್ತಿದೆ. ಹೀಗಿರುವಾಗ ಮೈತ್ರಿ ಸರ್ಕಾರವನ್ನು ...

ಅಂತಿಮ ಕ್ಷಣದವರೆಗೂ ಹೋರಾಟ ನಡೆಸುತ್ತೇವೆ: ಸಮ್ಮಿಶ್ರ ಸರ್ಕಾರ ಮುಖಂಡರು
ಕುಮಾರಸ್ವಾಮಿ
Published On :
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳ ಶಾಸಕರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಬುಡ ಅಲ್ಲಾಡುತ್ತಿದೆ. ಹೀಗಿರುವಾಗ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿಗೆ ತಿರುಗೇಟು ನೀಡಿ ಸರ್ಕಾರವನ್ನು ಉಳಿಸಿಕೊಳ್ಳಲು ಮಂತ್ರಿ ಮಂಡಲ ಸಂಕಲ್ಪ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವು ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಆದರೆ, ಅದರಿಂದ ಪಾರಾಗಲು ಇರುವ ಪರಿಹಾರ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಸರ್ಕಾರ ಉಳಿಸಿಕೊಳ್ಳಲು ಇರುವ ಎಲ್ಲ ವಿಧಾನಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.
ಬಿಜೆಪಿಯವರು ಮೈತ್ರಿ ಸರ್ಕಾರ ರಚನೆ ಬಳಿಕ ‘ದಾಳಿ’ ನಡೆಸುತ್ತಿರುವುದು ಮೊದಲ ಪ್ರಯತ್ನವಲ್ಲ. 6-7 ಬಾರಿ ಕೇಂದ್ರ ಸರ್ಕಾರವನ್ನು ಉಪಯೋಗ ಮಾಡಿಕೊಂಡು ‘ದಾಳಿ’ ನಡೆಸಿದೆ. ಈ ಹಿಂದೆ ನಡೆದ ‘ದಾಳಿ’ಗಳನ್ನು ಮೆಟ್ಟಿನಿಂತಿದ್ದೇವೆ. ಈಗ ಸ್ಪಲ್ಪ ಕೈ ಮೀರಿದೆ. ಈ ಹಿಂದಿಗಿಂತ ಪರಿಸ್ಥಿತಿ ಗಂಭೀರವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಸಾಧಕ- ಬಾಧಕಗಳ ಕುರಿತು ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರು ಸೇರಿದಂತೆ ಎಲ್ಲರೂ ಸಂಕಲ್ಪ ಮಾಡಿದ್ದು, ಬಿಜೆಪಿಯ ದಾಳಿಯನ್ನು ಧೈರ್ಯವಾಗಿ ಎದುರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.