ರಾಜಕೀಯ

ಇಂದು ಸಂಜೆ ಸ್ಪೀಕರ್ ರವರಿಂದ ಮೂವರು ಅತೃಪ್ತ ಶಾಸಕರ ವಿಚಾರಣೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕರ ಪೈಕಿಯಲ್ಲಿ ಕ್ರಮಬದ್ಧವಾಗಿರುವ ಶಾಸಕರಲ್ಲಿ ಮೂವರನ್ನು ಇಂದು ಸಂಜೆ 4 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ವಿಚಾರಣೆ ನಡೆಸಲಿದ್ದಾರೆ.

ಇಂದು ಸಂಜೆ ಸ್ಪೀಕರ್ ರವರಿಂದ ಮೂವರು ಅತೃಪ್ತ ಶಾಸಕರ ವಿಚಾರಣೆ
ಸ್ಪೀಕರ್ ರಮೇಶ್ ಕುಮಾರ್
Published On :
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕರ ಪೈಕಿಯಲ್ಲಿ ಕ್ರಮಬದ್ಧವಾಗಿರುವ  ಶಾಸಕರಲ್ಲಿ ಮೂವರನ್ನು ಇಂದು ಸಂಜೆ 4 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ವಿಚಾರಣೆ ನಡೆಸಲಿದ್ದಾರೆ.
ಸಭಾಧ್ಯಕ್ಷರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ರಾಜೀನಾಮೆ ಕೊಟ್ಟಿರುವ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿ ಎಂದು ಕೋರ್ಟ್ ಸೂಚಿಸಿತ್ತು. 
ಈ ಬೆಳವಣಿಗೆ ಬೆನ್ನಲ್ಲೇ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ದೌಡಾಯಿಸಿದ ಶಾಸಕರು ಪೊಲೀಸರ ಸರ್ಪಗಾವಲಿನಲ್ಲಿ ವಿಧಾನಸೌಧಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದರು. ಬಳಿಕ ಮತ್ತೆ ವಿಮಾನದಲ್ಲಿ ಮುಂಬೈಗೆ ವಾಪಸ್ ಆಗಿದ್ದಾರೆ.
ಬಳಿಕ ಮಾತನಾಡಿದ ಸಭಾಧ್ಯಕ್ಷರು, ಅತೃಪ್ತ ಶಾಸಕರು ಸಲ್ಲಿಸಿದ ರಾಜೀನಾಮೆ ಪತ್ರಗಳೆಲ್ಲ ಕ್ರಮಬದ್ಧವಾಗಿವೆ. ಅವಸರದಲ್ಲಿ ಅವುಗಳನ್ನು ಇತ್ಯರ್ಥ ಮಾಡುವುದಿಲ್ಲ. ನನಗೆ ಮನವರಿಕೆ ಆದ ಬಳಿಕವಷ್ಟೇ  ಅವುಗಳನ್ನು ಅಂಗೀಕರಿಸುವೆ. ಶಾಸಕರ ಸಹಕಾರ ದೊರೆತರೆ ವಾರದಲ್ಲೇ ವಿಚಾರಣೆ ಮುಗಿಯಬಹುದು. ಇಲ್ಲದಿದ್ದರೆ ಒಂದು ತಿಂಗಳೂ ಆಗಬಹುದು. ನಾನು ಯಾರ ಹಂಗಿನಲ್ಲೂ ಇಲ್ಲ. ಸಂವಿಧಾನ ಮತ್ತು ಜನರ ಪರ ಎಂದು ಹೇಳಿದ್ದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ರಾಜೀನಾಮೆ ಬಳಿಕ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ. ಅತೃಪ್ತ ಪರ ಸುಪ್ರೀಂಕೋರ್ಟ್ ನಲ್ಲಿ ವಾದಿಸುತ್ತಿರುವ ಹಿರಿಯ ವಕೀಲ ಮುಕುಲ್ ರೋಹ್ಟಗಿ, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಬೇಕಾಗಿದೆ. ಎಲ್ಲಾ ಶಾಸಕರು ಸ್ಪೀಕರ್ ಮುಂದೆ ಹಾಜರಾದರೆ ಅವರಿಗೆ ಅಫಿಡವಿಟ್ ನೀಡಬೇಕಾಗಿದೆ. ಮುಂದಿನ ಪರಿಶೀಲನೆ ಅಗತ್ಯದ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.