ರಾಜಕೀಯ

ರಾಜ್ಯದಲ್ಲಿ ಅಧಿಕಾರದಲ್ಲಿರುವವರು ಏನು ಮಾಡಲು ಹೇಸುವುದಿಲ್ಲ: ಡಿ ವಿ ಸದಾನಂದಗೌಡ

ಪ್ರಸ್ತಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಕೈಯಲ್ಲಿ ಅಧಿಕಾರವಿದೆ. ಅವರು ಏನು ಮಾಡಲು ಹೇಸಲ್ಲ ಎಂದು...

ರಾಜ್ಯದಲ್ಲಿ ಅಧಿಕಾರದಲ್ಲಿರುವವರು ಏನು ಮಾಡಲು ಹೇಸುವುದಿಲ್ಲ: ಡಿ ವಿ ಸದಾನಂದಗೌಡ
ಡಿವಿ ಸದಾನಂದಗೌಡ
Published On :
ಬೆಂಗಳೂರು: ಪ್ರಸ್ತಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಕೈಯಲ್ಲಿ ಅಧಿಕಾರವಿದೆ. ಅವರು ಏನು ಮಾಡಲು ಹೇಸಲ್ಲ ಎಂದು ಹೇಳುವ ಮೂಲಕ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಅಲ್ಲೋಲ ಕಲ್ಲೋಲ ಉಂಟಾಗಿದೆ. ಈ ಸಮಯದಲ್ಲಿ ಮುಖ್ಯಮಂತ್ರಿ ಅವರು ಅಧಿಕಾರದಲ್ಲಿ ಮುಂದುವರಿಯುವುದು ಸರಿಯಲ್ಲ. ಈ ಅಭಿಪ್ರಾಯ ಅವರಿಂದಲೇ ಬರಬೇಕು ಎಂದರು.
ಮುಖ್ಯಮಂತ್ರಿಗಳ ಮೇಲೆ ನಂಬಿಕೆ ಇಲ್ಲ ಎನ್ನುವುದು ಶಾಸಕರು ಸೇರಿದಂತೆ ಇಡೀ ಜಗತ್ತಿಗೆ ಗೊತ್ತು. ಇನ್ನು ಅವರೇ ವಿಶ್ವಾಸ ಮತಯಾಚನೆ ಮಾಡುವುದರಲ್ಲಿ ಅರ್ಥ ಏನಿದೆ? ಎಂದು ಪ್ರಶ‍್ನಿಸಿದ ಅವರು ಮುಖ್ಯಮಂತ್ರಿ ಅವರು ಕಾಲದೂಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.