ಬಿಎಲ್ ಸಂತೋಷ್ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ: ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ರಾಮಲಾಲ್ ಅವರ ರಾಜೀನಾಮೆಯಿಂದ ತೆರವಾದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

Published On :
ನವದೆಹಲಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ರಾಮಲಾಲ್ ಅವರ ರಾಜೀನಾಮೆಯಿಂದ ತೆರವಾದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು ತಕ್ಷಣವೇ ಜಾರಿಗೆ ಬಂದಿದೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬಿಎಲ್ ಸಂತೋಷ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸಂತೋಷ್ ಅವರ ಪದೋನ್ನತಿ ತಮಗೆ ಅತೀವ ಸಂತಸ ಉಂಟುಮಾಡಿದ್ದು, ಸಂತೋಷ್ ಅವರು ರಾಜ್ಯ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಕೊಂಡಿಯಾಗಿ ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುವುದರಿಂದ ರಾಜ್ಯದ ಕಾರ್ಯಕರ್ತರಿಗೆ ಅತೀವ ಸಹಾಯವಾಗಲಿದೆ, ಅವರನ್ನು ಉನ್ನತ ಹುದ್ದೆಗೆ ನೇಮಕ ಮಾಡಿರುವುದಕ್ಕೆ ಅಮಿತ್ ಶಾ ಹಾಗೂ ಬಿಜೆಪಿ ಕಾರ್ಯಧ್ಯಕ್ಷ ಜೆಪಿ ನಡ್ಡಾ ಅವರಿಗೂ ನನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Amit ShahYeddyurappaಯಡಿಯೂರಪ್ಪಅಮಿತ್ ಶಾಬಿಎಲ್ ಸಂತೋಷ್B.L. SantoshBJP general secretaryಬಿಜೆಪಿ ಪ್ರಧಾನ ಕಾರ್ಯದರ್ಶಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


