ಮುಂಬೈಗೆ ಹಾರಿದ ಎಂಟಿಬಿ ನಾಗರಾಜ್ :ಮುಖ್ಯಮಂತ್ರಿಗೆ ಮತ್ತೆ'ಟೆನ್ಷನ್'ಶುರು
ಸಿದ್ದರಾಮಯ್ಯ ಆಪ್ತ ಶಾಸಕ ಎಂಟಿಬಿ ನಾಗರಾಜ್ ಮನವೊಲಿಸಲು ನಿನ್ನೆ ಇಡೀ ದಿನ ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದ್ದರು. ಆದರೆ, ಇಂದು ಬೆಳಗ್ಗೆ ಎಂಟಿಬಿ ನಾಗರಾಜ್ ಕೂಡಾ ಮುಂಬೈನತ್ತ ಹಾರಿದ್ದಾರೆ.

Published On :
ಬೆಂಗಳೂರು: ಸಿದ್ದರಾಮಯ್ಯ ಆಪ್ತ ಶಾಸಕ ಎಂಟಿಬಿ ನಾಗರಾಜ್ ಮನವೊಲಿಸಲು ನಿನ್ನೆ ಇಡೀ ದಿನ ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದ್ದರು. ಆದರೆ, ಇಂದು ಬೆಳಗ್ಗೆ ಎಂಟಿಬಿ ನಾಗರಾಜ್ ಕೂಡಾ ಮುಂಬೈನತ್ತ ಹಾರಿದ್ದಾರೆ.
ಬೆಳಗ್ಗೆ 10-30ರಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಮುಂಬೈಗೆ ಹಾರಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಆರ್ ಅಶೋಕ್ ಕೂಡಾ, ಎಂಟಿಬಿ ನಾಗರಾಜ್ ಜೊತೆಗೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷದ ಮತ್ತೋರ್ವ ಅತೃಪ್ತ ಶಾಸಕ ಮುನಿರತ್ನ ಕೂಡಾ ನಿನ್ನೆ ಮಧ್ಯರಾತ್ರಿಯೇ ಮುಂಬೈ ತಲುಪಿದ್ದಾರೆ. ಸದ್ಯ ದೆಹಲಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಕೂಡಾ ಇಂದು ಮುಂಬೈಗೆ ಪ್ರಯಾಣಿಸಲಿದ್ದು, ಅತೃಪ್ತರ ಗುಂಪು ಸೇರಲಿದ್ದಾರೆ . ಇದರಿಂದಾಗಿ ಅತೃಪ್ತರ ಸಂಖ್ಯೆ 10ರಿಂದ 13ಕ್ಕೆ ಏರಿಕೆಯಾಗಿದ್ದು, ಈ ಗುಂಪಿನಲ್ಲಿ ಹೊಸ ಹುರುಪು ಬಂದಂತಾಗಿದೆ.
ಈ ಬೆಳವಣಿಗೆಗಳಿಂದ ಕಂಗಲಾಗಿರುವ ಮುಖ್ಯಮಂತ್ರಿಗೆ ಮತ್ತೆ'ಟೆನ್ಷನ್' ಶುರುವಾಗಿದೆ. ವಿಶ್ವಾಸಮತಯಾಚನೆಗೆ ಧಕ್ಕೆ ಎದುರಾಗುವ ಸಾಧ್ಯತೆ ಹೆಚ್ಚಾಗಿದ್ದು, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
ಈ ಮಧ್ಯೆ ಸರ್ಕಾರದ ಈ ಸ್ಥಿತಿಗೆ ಹೆಚ್ ಡಿ ರೇವಣ್ಣ ಅವರೇ ಕಾರಣ ಎಂದು ಬಹುತೇಕ ಅತೃಪ್ತ ಶಾಸಕರು ಆರೋಪಿಸಿದ್ದಾರೆ. ಎಲ್ಲಾ ಇಲಾಖೆಗಳಲ್ಲೂ ಹಸ್ತಕ್ಷೇಪದಿಂದಾಗಿ ರಾಜೀನಾಮೆ ನೀಡಬೇಕಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


