ರಾಜಕೀಯ

ಅದೆಲ್ಲಾ ಸುಳ್ಳು! ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳೋಕೆ ತಲೆ ಕೆಟ್ಟಿದ್ಯಾ?: ಯಡಿಯೂರಪ್ಪ

ಬೆಳಗಾವಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ನನಗೇನು ತಲೆ ಕೆಟ್ಟಿದೆಯಾ ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕ....

ಅದೆಲ್ಲಾ ಸುಳ್ಳು! ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳೋಕೆ ತಲೆ ಕೆಟ್ಟಿದ್ಯಾ?: ಯಡಿಯೂರಪ್ಪ
ಲಕ್ಷ್ಮಿ ಹೆಬ್ಬಾಳ್ಕರ್, ಯಡಿಯೂರಪ್ಪ
Published On :
ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ನನಗೇನು ತಲೆ ಕೆಟ್ಟಿದೆಯಾ ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಡಾಲರ್ಸ್ ಕಾಲೋನಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ನನಗೇನು ತಲೆ ಕೆಟ್ಟಿದೆಯಾ ? ಅವರಿಂದಾಗಿಯೇ ಕಾಂಗ್ರೆಸ್ ಶಾಸಕರು ಮುಂಬೈಗೆ ತೆರಳಿ ವಾಸ್ತವ್ಯ ಹೂಡಿದ್ದಾರೆ. ಹೀಗಾಗಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಮೈತ್ರಿ ಸರ್ಕಾರಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದಲೇ ಸಂಕಷ್ಟ ಬಂದಿರುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ
ಇಷ್ಟಕ್ಕೂ ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿಗೆ ಬರುತ್ತೇನೆ ಎಂದು ಹೇಳಿಲ್ಲ, ಮಾದ್ಯಮಗಳು ಅನಗತ್ಯವಾಗಿ ಅವರ ಹೆಸರನ್ನು ಪ್ರಸ್ತಾಪ ಮಾಡುತ್ತಿವೆ. ಹಾಗಾಗಿ ಅವರೆಂದಿಗೂ ಬಿಜೆಪಿಗೆ ಬರಲ್ಲ ಎಂದು ಬಿಎಸ್‍ವೈ ಸ್ಪಷ್ತನೆ ನೀಡಿದ್ದಾರೆ.
ಸಚಿವ ಎಂಟಿಬಿ ನಾಗರಾಜ್ ರಾಜೀನಾಮೆ ವಾಪಸ್ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಎಂಟಿಬಿ ಕುರಿತು ನಾನು ಏನೂ ಪ್ರತಿಕ್ರಿಯೆ ನೀಡಲ್ಲ, ಮುಂದಿನ ರಾಜಕೀಯ ಬೆಳವಣಿಗೆ ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಕಾದು ನೋಡಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.