ವಿಶ್ವಾಸಮತಯಾಚನೆ ಮುನ್ನ ಎಲ್ಲಾ ಶಾಸಕರ ಮನವೊಲಿಕೆ- ಸಿದ್ದರಾಮಯ್ಯ
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಮುನ್ನ ಎಲ್ಲಾ ಶಾಸಕರನ್ನು ಮನವೊಲಿಸಲಾಗುವುದು ಎಂದು ವಿಶ್ವಾಸ ಹೊಂದಿರುವುದಾಗಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

Published On :
ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಮುನ್ನ ಎಲ್ಲಾ ಶಾಸಕರನ್ನು ಮನವೊಲಿಸಲಾಗುವುದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರತಿಯೊಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ. ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮುಂಬೈನಲ್ಲಿರುವ ಎಲ್ಲಾ ಅತೃಪ್ತ ಶಾಸಕರು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದರು.
ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಪಕ್ಷಕ್ಕೆ ವಾಪಾಸ್ ಆಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸುಧಾಕರ್ ಬಗ್ಗೆ ಮಾತನಾಡುವುದಿಲ್ಲ. ರಾಜೀನಾಮೆ ಹಿಂತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ನಾಗರಾಜ್ ಹಾಗೂ ಸುಧಾಕರ್ ಒಟ್ಟಿಗೆ ನಿರ್ಧಾರ ಕೈಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿಯುವುದಾಗಿ ಎಂಟಿಬಿ ನಾಗರಾಜ್ ನಿರ್ಧರಿಸಿದ್ದಾರೆ. ಸುಧಾಕರ್ ಹಾಗೂ ಎಂಟಿಬಿ ನಾಗರಾಜ್ ಒಟ್ಟಿಗೆ ರಾಜೀನಾಮೆಯನ್ನು ಹಿಂಪಡೆಯಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


