ಅತೃಪ್ತ ಶಾಸಕರು ಕಾಂಗ್ರೆಸ್ ತೊರೆದು ಹೋಗುವುದಿಲ್ಲ ಎಂಬ ವಿಶ್ವಾಸ ನನಗಿದೆ: ಡಿ ಕೆ ಶಿವಕುಮಾರ್
ನಮ್ಮ ಶಾಸಕರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಅವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದು ...

Published On :
ಬೆಂಗಳೂರು: ನಮ್ಮ ಶಾಸಕರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಅವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದು ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದಾರೆ. ಹೀಗಾಗಿ ಪಕ್ಷ ತೊರೆಯುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಅತೃಪ್ತ ಶಾಸಕರು ತಮ್ಮ ಕ್ಷೇತ್ರದಲ್ಲಿ ಹುಲಿಯಂತೆ ಹೋರಾಡಿ ಕಷ್ಟಪಟ್ಟು ಗೆದ್ದುಬಂದವರು. ಹೀಗಾಗಿ ಏಕಾಏಕಿ ಈಗ ಪಕ್ಷ ತೊರೆಯಲು ಸಾಧ್ಯವೇ ಇಲ್ಲ. ಸದನದಲ್ಲಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಕಾನೂನುಬದ್ಧವಾಗಿಯೇ ನಡೆದುಕೊಳ್ಳುತ್ತಾರೆ, ಕಾನೂನು ಸ್ಪಷ್ಟವಾಗಿದೆ. ವಿಶ್ವಾಸಮತಕ್ಕೆ ವಿರುದ್ಧವಾಗಿ ಮತ ಹಾಕಿದರೆ ತಮ್ಮ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ ಎಂದರು.
ಅತೃಪ್ತ ಶಾಸಕರ ಬೇಡಿಕೆಗಳನ್ನು ಈಡೇರಿಸಲು ಪಕ್ಷ ಸಿದ್ಧವಿದೆ. ಸರ್ಕಾರವನ್ನು ಅವರು ಉಳಿಸುತ್ತಾರೆ ಎಂಬ ಸೂಚನೆ ನಮಗೆ ಸಿಕ್ಕಿದೆ ಎಂದು ಸಚಿವ ಡಿಕೆಶಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


