ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಗುರುವಾರ
ರಾಜ್ಯ ಸಮ್ಮಿಶ್ರ ಸರ್ಕಾರದ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನಡೆಯುತ್ತಿರುವ ಬೃಹನ್ನಾಟಕ ಗುರುವಾರದವರೆಗೆ ಮುಂದುವರೆಯಲಿದ್ದು,...

Published On :
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನಡೆಯುತ್ತಿರುವ ಬೃಹನ್ನಾಟಕ ಗುರುವಾರದವರೆಗೆ ಮುಂದುವರೆಯಲಿದ್ದು, ಜು.18 ರಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ.
ಜು.15 ರಂದು ಸ್ಪೀಕರ್ ನೇತೃತ್ವದಲ್ಲಿ ನಡೆದ ಕಲಾಪ ಸದನ ಸಮಿತಿ ಸಭೆಯಲ್ಲಿ ಗುರುವಾರದಂದು ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ವಿಪಕ್ಷ ನಾಯಕ ಯಡಿಯೂರಪ್ಪ ಸಭೆಯಲ್ಲಿ ಭಾಗವಹಿಸಿದ್ದರು.
ಗುರುವಾರ ಸಿಎಂ ವಿಶ್ವಾಸಮತಯಾಚನೆಗೆ ಒಪ್ಪಿಗೆ ಸೂಚಿಸಿರುವ ಬಿಜೆಪಿ ನಾಯಕರು ಜು.18 ವರೆಗೆ ಯಾವುದೇ ಕಲಾಪವನ್ನೂ ನಡೆಸದಂತೆ ಸ್ಪೀಕರ್ ಗೆ ಮನವಿ ಮಾಡಿದ್ದಾರೆ.
"ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟು ನಾವು ಗುರುವಾರದಂದು ವಿಶ್ವಾಸಮತಯಾಚನೆಗೆ ಒಪ್ಪಿಗೆ ಸೂಚಿಸಿದ್ದೇವೆ, ಆದರೆ ವಿಶ್ವಾಸಮತಯಾಚನೆ ಬಳಿಕವಷ್ಟೇ ಕಲಾಪ ನಡೆಯಬೇಕೆಂದು ಮನವಿ ಮಾಡಿದ್ದೇವೆ" ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
trust voteವಿಶ್ವಾಸಮತHD KumaraswamyThursdayಗುರುವಾರಸಿಎಂ ಹೆಚ್ ಡಿ ಕುಮಾರಸ್ವಾಮಿರಾಜ್ಯ ಸಮ್ಮಿಶ್ರ ಸರ್ಕಾರKarnataka Political crisis
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


