ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ರಂತೆ ವರ್ತನೆ: ಶೋಭಾ ಕರಂದ್ಲಾಜೆ ಟೀಕೆ
ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.

Published On :
ಬೆಂಗಳೂರು:ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಸ್ಥಾನದಲ್ಲಿರುವ ರಮೇಶ್ ಕುಮಾರ್ ಅವರು ನೃತ್ಯಗಾರ್ತಿಯರು ಮತ್ತು ಹೆಣ್ಣು ಮಕ್ಕಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ಅವರು ಕಾಂಗ್ರೆಸ್ ಏಜೆಂಟ್ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಭರತನಾಟ್ಯ, ಯಕ್ಷಗಾನ, ಮತ್ತು ನೃತ್ಯಗಳಿಂದ ಅನೇಕ ಮಂದಿ ದೇವರನ್ನು ಒಲಿಸಿಕೊಂಡಿದ್ದಾರೆ. ಇಂತಹ ನೃತ್ಯದ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವಹೇಳನಕಾರಿ ಹಾಗೂ ಹಗುರವಾಗಿ ಮಾತನಾಡಿದ್ದಾರೆ , ಅವರು ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿShobha Karandlajeಶೋಭಾ ಕರಂದ್ಲಾಜೆKarnataka politicsಸ್ಪೀಕರ್ ರಮೇಶ್ ಕುಮಾರ್Speaker RameshKumar ರಾಜ್ಯ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


