ಸುಪ್ರೀಂ ಕೋರ್ಟ್- ನನ್ನ ನಡುವೆ ಸಂಘರ್ಷ ಇಲ್ಲ : ಸ್ಪೀಕರ್ ರಮೇಶ್ ಕುಮಾರ್
ಸುಪ್ರೀಂಕೋರ್ಟ್ ಗಿಂತ ದೊಡ್ಡವನು ನಾನಲ್ಲ, ಸುಪ್ರೀಂಕೋರ್ಟ್ ಹಾಗೂ ತಮ್ಮ ನಡುವೆ ಯಾವುದೇ ಸಂಘರ್ಷ ಇಲ್ಲ ಎಂದು ವಿಧಾನಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ಹೇಳಿದ್ದಾರೆ.

Published On :
ಕೋಲಾರ: ಸುಪ್ರೀಂಕೋರ್ಟ್ ಗಿಂತ ದೊಡ್ಡವನು ನಾನಲ್ಲ, ಸುಪ್ರೀಂಕೋರ್ಟ್ ಹಾಗೂ ತಮ್ಮ ನಡುವೆ ಯಾವುದೇ ಸಂಘರ್ಷ ಇಲ್ಲ ಎಂದು ವಿಧಾನಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ಹೇಳಿದ್ದಾರೆ.
ಶ್ರೀನಿವಾಸಪುರದ ಅಡ್ಡಗಲ್ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಗೆ ರಾಜೀನಾಮೆ ನೀಡುವಂತೆ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಕುರಿತಂತೆ ಇಂದು ವಾದ- ವಿವಾದ ನಡೆದಿದೆ. ಅದರ ಬಗ್ಗೆ ಅಂತಿಮ ತೀರ್ಮಾನ ಬರುವವರೆಗೂ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ನನಗೆ ಕೊಟ್ಟಿರುವ ಜವಾಬ್ದಾರಿ ಯನ್ನು ನಿರ್ವಹಣೆ ಮಾಡುತ್ತಿದ್ದೇನೆ. ನಾನು ಯಾರಿಗೂ ಸವಾಲು ಹಾಕಿಲ್ಲ. ನಾಳೆ ಬೆಳಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಎಲ್ಲರಿಗೂ ಇದ್ದಂತೆ ನನಗೂ ಕುತೂಹಲ ಇದೆ. ಯಾವ ರೀತಿಯ ಆದೇಶ ಬರುತ್ತದೋ ಕಾದು ನೋಡಬೇಕು. ನಂತರ ಪ್ರತಿಕ್ರಿಯೆ ನೀಡುವುದಾಗಿ ರಮೇಶ್ ಕುಮಾರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸುಪ್ರೀಂಕೋರ್ಟ್SCಬಂಡಾಯ ಶಾಸಕರುKarnataka politicsಸ್ಪೀಕರ್ ರಮೇಶ್ ಕುಮಾರ್Speaker Ramesh kumarRebel MLA\'S ರಾಜ್ಯ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


