ವಿಶ್ವಾಸ ಮತಯಾಚನೆ ವೇಳೆ ರಾಜಿನಾಮೆ ವಾಪಸ್ ಬಗ್ಗೆ ನಿರ್ಧಾರ ಪ್ರಕಟಿಸುತ್ತೇನೆ: ರಾಮಲಿಂಗಾರೆಡ್ಡಿ
ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ...

Published On :
ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಅವರು ವಿಧಾನಸಭೆ ಕಲಾಪಕ್ಕೆ ಹಾಜರಾಗಲಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವ ವೇಳೆ ನನ್ನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶಾಸಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನಾನು ಯಾವುದೇ ಸ್ಥಾನಮಾನಕ್ಕೋಸ್ಕರ ರಾಜೀನಾಮೆ ನೀಡಿಲ್ಲ. ಪಕ್ಷದ ಆಂತರಿಕ ವಿಚಾರಕ್ಕಾಗಿ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ವಾಪಸ್ ಪಡೆಯಬೇಕೇ, ಬೇಡವೇ ಎಂಬ ನನ್ನ ನಿರ್ಧಾರವನ್ನು ಗುರುವಾರ ವಿಶ್ವಾಸಮತ ಯಾಚನೆ ವೇಳೆಯೇ ಪ್ರಕಟಿಸುತ್ತೇನೆ. ಮುಖ್ಯಮಂತ್ರಿ ವಿಶ್ವಾಸ ಮತಯಾಚನೆ ಮಾಡುತ್ತಿರುವುದರಿಂದ ಸದನಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಅತೃಪ್ತ ಶಾಸಕರು ನಿಮ್ಮನ್ನೇ ತಮ್ಮ ನಾಯಕರು ಎಂದು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಮೇಲಿನ ಗೌರವಕ್ಕೆ ಆ ರೀತಿ ಹೇಳಿರಬಹುದು. ಆದರೆ, ಅವರ್ಯಾರೂ ನನ್ನ ಸಂಪರ್ಕದಲ್ಲಿಲ್ಲ. ನಾನು ಅವರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


