ಅತೃಪ್ತ ಶಾಸಕರಿಗೆ ರಿಲೀಫ್: ರಾಜಿನಾಮೆ ಬಗ್ಗೆ ನಿರ್ದಿಷ್ಟ ಸಮಯದಲ್ಲಿ ನಿರ್ಧರಿಸುವ ವಿವೇಚನೆ ಸ್ಪೀಕರ್ ಗೆ ಬಿಟ್ಟದ್ದು; ಸುಪ್ರೀಂ ಕೋರ್ಟ್
ಅತೃಪ್ತ ಶಾಸಕರ ರಾಜಿನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ನಿರ್ಧಿಷ್ಟ ಸಮಯದಲ್ಲಿ ರಾಜಿನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.

Published On :
ನವದೆಹಲಿ: ಅತೃಪ್ತ ಶಾಸಕರ ರಾಜಿನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ನಿರ್ಧಿಷ್ಟ ಸಮಯದಲ್ಲಿ ರಾಜಿನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ನಿನ್ನೆ ಅತೃಪ್ತ ಶಾಸಕರ ಪರ ವಕೀಲರ ಪರ - ವಿರೋಧ ವಾಗಳನ್ನು ಆಲಿಸಿದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ಪೀಠ ಈ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ತಾನು ಮಧ್ಯಸ್ಥಿಕೆ ವಹಿಸುವುದಿಲ್ಲವೆಂದು ಹೇಳಿರುವ ನ್ಯಾಯಾಲಯ ಸ್ಪೀಕರ್ ಹುದ್ದೆಯ ಘನತೆ ಎತ್ತಿ ಹಿಡಿದಿದೆ.
ಸುಪ್ರೀಂ ಕೋರ್ಟ್ ನ ಈ ತೀರ್ಪಿನಿಂದಾಗಿ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ನೀಡಿದೆ. ರಾಜಿನಾಮೆ ನೀಡಿರುವ 15 ಶಾಸಕರನ್ನು ವಿಧಾನಸಭೆಗೆ ಹಾಜರಾಗಬೇಕೆಂದು ಒತ್ತಾಯ ಮಾಡುವಂತಿಲ್ಲ ಎಂದು ಹೇಳಿದೆ, ಈ ಮೂಲಕ ಶಾಸಕರಿಗೆ ನೀಡಿದ ವಿಪ್ ಗೆ ಮಾನ್ಯತೆ ಇರುವುದಿಲ್ಲ.
ನಾಳೆ ಸಿಎಂ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸ ಮತ ಯಾಚನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸದನಕ್ಕೆ ಬರುವಂತೆ ಒತ್ತಡ ಹಾಕುವಂತಿಲ್ಲ, ಎಲ್ಲರೂ ಸಂವಿಧಾನವನ್ನು ಕಾಪಾಡಬೇಕು ಎಂದು ಹೇಳಿರುವ ಸುಪ್ರೀಂಕೋರ್ಟ್, ಸದನಕ್ಕೆ ಹಾಜರಾಗುವುದು ಶಾಸಕರ ವಿವೇಚನೆಗೆ ಬಿಟ್ಟ ವಿಷಯ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್CongressJDSKarnatakaಕರ್ನಾಟಕಜೆಡಿಎಸ್Speakerಕಾಂಗ್ರೆಸ್ ಶಾಸಕರುrebel MLAsಕಾಂಗ್ರೆಸ್ ಸ್ಪೀಕರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


